Sunday, January 19, 2025
ಬೆಂಗಳೂರುಸಿನಿಮಾಸುದ್ದಿ

ಬಿಗ್ ಬಾಸ್ ಮನೆಯಲ್ಲಿ ಪ್ರಜ್ಞೆ ತಪ್ಪಿ ಕುಸಿದು ಬಿದ್ದ ಚೈತ್ರಾ ಕುಂದಾಪುರ – ಕಹಳೆ ನ್ಯೂಸ್

ಬಿಗ್ ಬಾಸ್ ನೀಡಿದ್ದ ಜೋಡಿ ಟಾಸ್ಕ್ ಮುಗಿದ ಬಳಿಕ ಬಾತ್ ರೂಮ್ ಏರಿಯಾದಲ್ಲಿ ಒಬ್ಬರೇ ಇದ್ದಾಗ ಚೈತ್ರಾ ಕುಂದಾಪುರ ಕುಸಿದು ಬಿದ್ದಿದ್ದಾರೆ. ಇದನ್ನು ಗಮನಿಸಿದ ಬಿಗ್ ಬಾಸ್ ಕೂಡಲೇ ಚೈತ್ರಾ ನೆರವಿಗಾಗಿ ಮೋಕ್ಷಿತಾ ಪೈ ಮತ್ತು ಗೌತಮಿ ಜಾದವ್ ಅವರನ್ನು ಕಳಿಸಿದ್ದಾರೆ.

ಅವರಿಬ್ಬರು ಓಡಿ ಬಂದು ನೋಡಿದಾಗ ಚೈತ್ರಾ ಕುಂದಾಪುರ ಅವರು ನೆಲದ ಮೇಲೆ ಪ್ರಜ್ಞೆ ತಪ್ಪಿದ ಸ್ಥಿತಿಯಲ್ಲಿ ಬಿದ್ದಿದ್ದರು. ಬಳಿಕ ಬಿಗ್ ಬಾಸ್ ಮನೆಯ ಇನ್ನುಳಿದ ಸದಸ್ಯರು ಕೂಡ ಬಂದರು. ಎಷ್ಟು ಪ್ರಯತ್ನಿಸಿದರೂ ಕೂಡ ಚೈತ್ರಾ ಅವರಿಗೆ ಪ್ರಜ್ಞೆ ಬಂದಿಲ್ಲ. ಇದರಿಂದ ಮನೆಯಲ್ಲಿ ಆತಂಕದ ಪರಿಸ್ಥಿತಿ ನಿರ್ಮಾಣವಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಪ್ರಜ್ಞೆ ತಪ್ಪಿ ಬಿದ್ದಿದ್ದ ಚೈತ್ರಾ ಕುಂದಾಪುರ ಅವರ ಮುಖದ ಮೇಲೆ ನೀರು ಚಿಮುಕಿಸಲಾಯಿತು. ಆದರೂ ಸಹ ಅವರ ಎಚ್ಚರಗೊಳ್ಳಲಿಲ್ಲ. ಕೂಡಲೇ ಅವರನ್ನು ಕನ್ಫೆಷನ್​ ರೂಮಿಗೆ ಕರೆದುಕೊಂಡು ಬರುವಂತೆ ಬಿಗ್ ಬಾಸ್ ಆದೇಶಿಸಿದರು. ತ್ರಿವಿಕ್ರಮ್ ಅವರು ಚೈತ್ರಾ ಅವರನ್ನು ಎತ್ತಿಕೊಂಡು ಬಂದು ಕನ್ಫೆಷನ್​ ರೂಮ್​ನಲ್ಲಿ ಮಲಗಿಸಿದರು. ಎತ್ತಿಕೊಂಡ ಬರುವಾಗ ಚೈತ್ರಾ ಪರಿಸ್ಥಿತಿ ಗಂಭೀರವಾಗಿದ್ದಂತೆ ಕಾಣಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಬಿಗ್ ಬಾಸ್ ಮನೆಯಲ್ಲಿ ಪ್ರತಿ ದಿನವೂ ಒಂದಲ್ಲ ಒಂದು ಟಾಸ್ಕ್ ಇರುತ್ತದೆ. ಹಾಗಾಗಿ ಎನರ್ಜಿ ಲೆವೆಲ್ ಕಾಪಾಡಿಕೊಳ್ಳುವುದು ಮುಖ್ಯ. ಚೈತ್ರಾ ಅವರು ಹೀಗೆ ಏಕಾಏಕಿ ಪ್ರಜ್ಞೆ ತಪ್ಪಿ ಬೀಳಲು ಕಾರಣ ಆಗಿದ್ದು ಏನು ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ. ಕಳಪೆ ಮತ್ತು ಉತ್ತಮ ಯಾರು ಎಂಬುದನ್ನು ಆಯ್ಕೆ ಮಾಡುವ ಪ್ರಕ್ರಿಯೆಯಲ್ಲಿ ಚೈತ್ರಾ ಅವರು ಕಾಣಿಸಿಕೊಳ್ಳಲಿಲ್ಲ. ಅವರನ್ನು ಈ ಪ್ರತಿಕ್ರಿಯೆಯಿಂದಲೇ ಹೊರಗೆ ಇಡಲಾಗಿದೆ.

ಈ ಮೊದಲಿನ ಸಂಚಿಕೆಯಲ್ಲಿ ಚೈತ್ರಾ ಕುಂದಾಪುರ ಮತ್ತು ಶಿಶಿರ್ ನಡುವೆ ದೊಡ್ಡ ಜಗಳ ಆಗಿತ್ತು. ಆಗ ಚೈತ್ರಾ ಮೇಲೆ ಶಿಶಿರ್ ಅವರು ಸಿಕ್ಕಾಪಟ್ಟೆ ಕೂಗಾಡಿದ್ದರು. ಅನೇಕರ ಜೊತೆ ಚೈತ್ರಾ ಕಿರಿಕ್ ಮಾಡಿಕೊಂಡಿದ್ದಾರೆ. ಅನಗತ್ಯವಾಗಿ ಜೋರು ಧ್ವನಿಯಲ್ಲಿ ಮಾತನಾಡುವ ಮೂಲಕ ಅವರು ಕಿರಿಕ್​ಗಳನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಹಾಗಾಗಿ ನಾಮಿನೇಷನ್​ ವೇಳೆ ಅವರು ಅನೇಕರ ಟಾರ್ಗೆಟ್ ಆಗುತ್ತಿದ್ದಾರೆ. ಇದೀಗ ಚೈತ್ರಾ ಕುಂದಾಪುರ ಪ್ರಜ್ಞೆ ತಪ್ಪಿ ಬಿದ್ದಿರುವುದು ನೋಡಿ ಅವರ ಅಭಿಮಾನಿಗಳು ಕಂಗಾಲಾಗಿದ್ದಾರೆ.