Friday, January 24, 2025
ಬೆಂಗಳೂರುಸುದ್ದಿ

ಸರಳವಾಗಿ ನಿಶ್ಚಿತಾರ್ಥ ಮಾಡಿಕೊಂಡ ನಟ ಡಾಲಿ ಧನಂಜಯ್, ಧನ್ಯತಾ : ಫೆ.16ರಂದು ಮೈಸೂರಿನ ಎಕ್ಸಿಬಿಷನ್ ಗ್ರೌಂಡ್‌ನಲ್ಲಿ  ಮದುವೆ  – ಕಹಳೆ ನ್ಯೂಸ್

ಬೆಂಗಳೂರು: ಸ್ಯಾಂಡಲ್‌ವುಡ್ ನಟ ಡಾಲಿ ಧನಂಜಯ್ ಮತ್ತು ವೈದ್ಯೆ ಧನ್ಯತಾ ನಿಶ್ಚಿತಾರ್ಥ ಕಾರ್ಯಕ್ರಮ ಇಂದು(ನ.17) ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಅರಸಿಕೆರೆ ತಾಲೂಕು ಕಾಳೇನಹಳ್ಳಿಯಲ್ಲಿರುವ ಧನಂಜಯ್ ನಿವಾಸದಲ್ಲಿ ಸರಳವಾಗಿ ನಿಶ್ಚಿತಾರ್ಥ ಕಾರ್ಯಕ್ರಮ ನಡೆಯಿತು. ಮೈಸೂರಿನಲ್ಲಿ ಫೆ.16 ರಂದು ಮದುವೆ ಕಾರ್ಯಕ್ರಮ ನಡೆಯಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ದೀಪಾವಳಿ ಹಬ್ಬದ ಸಂಭ್ರಮದಲ್ಲಿ ಡಾಲಿ ತನ್ನ ಬಾಳಸಂಗಾತಿಯನ್ನು ಪರಿಚಯಿಸಿದ್ದರು. ಭಾವಿ ಪತ್ನಿ ಗೈನೋಕಾಲಾಜಿಸ್ಟ್ ಆಗಿರುವ ಧನ್ಯತಾ ಜೊತೆಗಿನ ಸುಂದರವಾದ ವಿಡಿಯೋ ಹಂಚಿಕೊಳ್ಳುವ ಮೂಲಕ ಮದುವೆ ಸುದ್ದಿಯನ್ನು ಹಂಚಿಕೊAಡಿದ್ದರು.

ಡಾಲಿ ಮತ್ತು ಧನ್ಯತಾ ಇಬ್ಬರು ಅನೇಕ ವರ್ಷಗಳ ಪರಿಚಯ, ಈ ಪರಿಚಯ ಪ್ರೀತಿಗೆ ತಿರುಗಿ ಇದೀಗ ಹಸೆಮಣೆ ಏರುತ್ತಿದ್ದಾರೆ. ಚಿತ್ರದುರ್ಗ ಮೂಲದ ಧನ್ಯತಾ ಅಪ್ಪಟ ಕನ್ನಡತಿ, ಓದಿದ್ದು ಮೈಸೂರಿನಲ್ಲಿ. ಅರಸೀಕೆರೆ ಮೂಲದ ನಟ ಧನಂಜಯ ಓದಿದ್ದು ಕೂಡ ಮೈಸೂರಿನಲ್ಲಿಯೇ ಎನ್ನುವುದು ವಿಶೇಷ.

ಧನ್ಯತಾ ಮಿಡಲ್ ಕ್ಲಾಸ್ ಹುಡುಗಿ ಕಷ್ಟ ಪಟ್ಟು ಡಾಕ್ಟರ್ ಆಗಿದ್ದಾರೆ. ಅಲ್ಲದೆ ಅವರ ವರ್ಕ್ ಎಥಿಕ್ಸ್ ಯೋಚನೆಗಳು ನನಗೆ ಇಷ್ಟ ಆಯ್ತು ಎಂದು ಡಾಲಿ ವಾಹಿನಿಯೊಂದರ ಸಂದರ್ಶನದಲ್ಲಿ ಈ ಹಿಂದೆ ಹೇಳಿದ್ದರು.

ಫೆಬ್ರವರಿ 16ರಂದು ಮೈಸೂರಿನ ಎಕ್ಸಿಬಿಷನ್ ಗ್ರೌಂಡ್‌ನಲ್ಲಿ ಡಾಲಿ ಮತ್ತು ಧನ್ಯತಾ ಮದುವೆ ನಡೆಯಲಿದೆ. ಮೈಸೂರು ಧನಂಜಯ ಮತ್ತು ಧನ್ಯತಾ ಇಬ್ಬರಿಗೂ ಭಾವನಾತ್ಮಕವಾಗಿ ಸಂಬAಧ ಬೆಸೆದ ಸ್ಥಳ ಹಾಗಾಗಿ ಅಲ್ಲಿಯೇ ಹಸೆಮಣೆ ಏರುವ ನಿರ್ಧಾರ ಮಾಡಿದ್ದಾರೆ. ಅದ್ದೂರಿಯಾಗಿ ನಡೆಯುವ ಮದುವೆ ಸಮಾರಂಭದಲ್ಲಿ ಸಿನಿಮಾರಂಗ, ರಾಜಕೀಯ ಸೇರಿದಂತೆ ಬೇರೆ ಬೇರೆ ಕ್ಷೇತ್ರದ ಗಣ್ಯರು ಹಾಜರಾಗಲಿದ್ದಾರೆ. ಬೆಳಗ್ಗೆ ಮಾಂಗಲ್ಯ ಧಾರಣೆ ಅದೇ ದಿನ ಅದೆ ಗ್ರೌಂಡ್ ನಲ್ಲಿ ಆರತಕ್ಷತೆ ಸಮಾರಂಭ ನಡೆಯಲಿದೆ.