ಬಂಟ್ವಾಳ: ಸಿಡಿಲು ಬಡಿದು ವಿದ್ಯಾರ್ಥಿ ಮೃತಪಟ್ಟ ಘಟನೆ ನ.17 ರಂದು ನಡೆದಿದೆ.ಬಂಟ್ವಾಳ ತಾಲೂಕು ಕೆದಿಲ ಪೇರಮುಗೇರು ನಿವಾಸಿ ಶ್ರೀ ರಾಮ ಶಾಲೆಯ 8 ನೇ ತರಗತಿ ವಿದ್ಯಾರ್ಥಿ ಸುಬೋದ್ (13) ಎಂದು ಗುರುತಿಸಲಾಗಿದೆ.
ಇಂದು ಸಂಜೆ ಬಾರಿ ಗುಡುಗು ಸಿಡಿಲು ಸಹಿತ ಮಳೆಯಾಗಿತ್ತು ಈ ಸಂದರ್ಭ ಸಿಡಿಲು ಬಡಿದು ಬಾಲಕ ಸಾವನ್ನಪ್ಪಿದ್ದಾನೆ. ಸಂಜೆ 5 ಗಂಟೆ ಸುಮಾರಿಗೆ ಕೆದಿಲ ಗ್ರಾಮದ ಗಡಿಯಾರ ನಿವಾಸಿ ಸುಭೋದ್ ಸಿ (14) ಸಿಡಿಲು ಬಡಿದು ಗಂಭೀರ ಗಾಯಗೊಂಡಿದ್ದ ಕೂಡಲೇ ಅವರನ್ನು ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ಯಲಾಯಿತಾದ್ರೂ ಅಲ್ಲಿ ಆತ ಮೃತಪಟ್ಟಿರುವುದಾಗಿ ತಿಳಿಸಲಾಯಿತು.
ಸುಭೋದ್ ಅವರು ಮನೆಯಂಗಳದಲ್ಲಿ ನಿಂತಿದ್ದ ವೇಳೆ ಈ ದುರ್ಘಟನೆ ನಡೆದಿದೆ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ. ಮರಣೋತ್ತರ ಪರೀಕ್ಷೆಗಾಗಿ ದೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ರವಾನೆ ಕೊಂಡೊಯ್ಯಲಾಗಿದೆ.