Recent Posts

Sunday, January 19, 2025
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು:ಮುಖ್ಯ ವರದಿಗಾರ ಭುವನೇಂದ್ರ ಪುದುವೆಟ್ಟು ನಿಧನ-ಕಹಳೆ ನ್ಯೂಸ್

ಮಂಗಳೂರು: ಬೆಳ್ತಂಗಡಿ ಸುದ್ದಿ ಬಿಡುಗಡೆ ಪತ್ರಿಕೆಯ ಮುಖ್ಯ ವರದಿಗಾರ ಭುವನೇಂದ್ರ ಪುದುವೆಟ್ಟು (42) ನ.19ರಂದು ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಪಿತ್ಥಕೋಶದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು ಎಂದು ಹೇಳಲಾಗಿದೆ.
ಇವರು ಧರ್ಮಸ್ಥಳ ಗ್ರಾಮದ ಪುದುವೆಟ್ಟು ನಿವಾಸಿ ನಾರಾಯಣ ಪೂಜಾರಿ ಮತ್ತು ಮೋಹಿನಿ ದಂಪತಿಯ ಪುತ್ರರಾದ ಭುವನೇಂದ್ರ ಅವರಿಗೆ ಎರಡು ದಿನಗಳ ಹಿಂದೆ ತೀವ್ರ ಹೊಟ್ಟೆನೋವು ಮತ್ತು ವಾಂತಿ ಕಾಣಿಸಿಕೊಂಡಿದ್ದರಿAದ ಅವರನ್ನು ಮೂಡಬಿದ್ರೆ ಆಳ್ವಾಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರೋಗ್ಯ ತಪಾಸಣೆ ವೇಳೆ ಪಿತ್ತಕೋಶದಲ್ಲಿ ಕಲ್ಲು ಇರುವುದರಿಂದ ಅಕ್ಯುಟ್ ಪ್ರಾಂಕಿಯಾಸಿಸ್ ಇರುವುದು ಗೊತ್ತಾಗಿತ್ತು. ತಕ್ಷಣ ಅವರನ್ನು ಮಂಗಳೂರು ಅತ್ತಾವರದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ನ.19ರಂದು ಕೊನೆಯುಸಿರೆಳೆದಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕರಾವಳಿ ಅಲೆ, ವೆಬ್‌ದುನಿಯಾ, ಕಸ್ತೂರಿ ಚಾನೆಲ್ ನಲ್ಲಿ ಪತ್ರಕರ್ತರಾಗಿದ್ದ ಅವರು, ವಿಜಯವಾಣಿ ಪತ್ರಿಕೆಯ ಮುಖ್ಯ ಉಪಸಂಪಾದಕರಾಗಿದ್ದರು. ಬಳಿಕ ಬೆಳ್ತಂಗಡಿ ಸುದ್ದಿ ಬಿಡುಗಡೆ ಪತ್ರಿಕೆಯ ಮುಖ್ಯ ವರದಿಗಾರರಾಗಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಮೃತರು ತಂದೆ ನಾರಾಯಣ ಪೂಜಾರಿ, ತಾಯಿ ಮೋಹಿನಿ, ಪತ್ನಿ ಸುಜಾತ, ಈರ್ವರು ಮಕ್ಕಳು ಮತ್ತು ಸಹೋದರ ಯತೀಂದ್ರ ಮತ್ತು ಸಹೋದರಿಯನ್ನು ಅಗಲಿದ್ದಾರೆ.
ಭುವನೇಂದ್ರ ಅವರ ಪಾರ್ಥೀವ ಶರೀರವನ್ನು ಇಂದು ಮಧ್ಯಾಹ್ನ ಮಂಗಳೂರು ಆಸ್ಪತ್ರೆಯಿಂದ ಪುದುವೆಟ್ಟು ಮನೆಗೆ ಕರೆ ತಂದು ಅಂತಿಮ ವಿಧಿವಿಧಾನ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.