Sunday, January 19, 2025
ಉಡುಪಿಕಾಪುಸುದ್ದಿ

50 ಲಕ್ಷ ರೂಪಾಯಿ ಅನುದಾನದಲ್ಲಿ ಹೆಜಮಾಡಿ ಸಮುದ್ರ ತೀರದ ರಸ್ತೆ ಅಭಿವೃದ್ಧಿ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಗುದ್ದಲಿ ಪೂಜೆ-ಕಹಳೆ ನ್ಯೂಸ್

ಕಾಪು: ವಿಧಾನಸಭಾ ಕ್ಷೇತ್ರದ ಹೆಜಮಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಮುದ್ರ ತೀರಕ್ಕೆ ಸಮಾನಾಂತರ ರಸ್ತೆ ಅಭಿವೃದ್ಧಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಶಿಫಾರಸ್ಸಿನ ಮೇರೆಗೆ ಮೀನುಗಾರಿಕಾ ಇಲಾಖೆಯಿಂದ 50 ಲಕ್ಷ ರೂಪಾಯಿ ಅನುದಾನದ ಮಂಜೂರಾಗಿದ್ದು, ಇದರ ಗುದ್ದಲಿ ಪೂಜೆಯನ್ನು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು.

ಈ ಸಂದರ್ಭದಲ್ಲಿ ಹೆಜಮಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರೇಶ್ಮಾ, ಉಪಾಧ್ಯಕ್ಷರಾದ ಮೋಹನ್ ಸುವರ್ಣ, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಸ್ಥಳೀಯ ಸದಸ್ಯರಾದ ಜನಾರ್ದನ ಕೋಟ್ಯಾನ್, ಬಬಿತಾ ಪುರುಶೋತ್ತಮ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಶರಣ್ ಕುಮಾರ್ ಮಟ್ಟು, ಪಡುಬಿದ್ರಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಶಿವಪ್ರಸಾದ್ ಎಲ್ಲದಡಿ, ಪಕ್ಷದ ಪ್ರಮುಖರಾದ ಮಿಥುನ್ ಆರ್ ಹೆಗ್ಡೆ, ಪಾಂಡುರAಗ ಹೆಜಮಾಡಿ ಹಾಗೂ ಹೆಜಮಾಡಿ ಗ್ರಾಮ ಪಂಚಾಯತ್ ಸದಸ್ಯರು ಮತ್ತು ಸ್ಥಳೀಯರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು