Sunday, January 19, 2025
ಬೆಂಗಳೂರುಸುದ್ದಿ

ಡಿ.ಆರ್.ರಾಜು ನಿಧನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ -ಕಹಳೆ ನ್ಯೂಸ್

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಹಿಂದುಳಿದ ವರ್ಗಗಳ ಘಟಕದ ರಾಜ್ಯ ಉಪಾಧ್ಯಕ್ಷರು ಹಾಗೂ ಕಾರ್ಕಳ ಬಿಲ್ಲವ ಸಂಘದ ಅಧ್ಯಕ್ಷರಾದ ಡಿ.ಆರ್.ರಾಜು ಅವರ ನಿಧನಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ ಸೂಚಿಸಿದ್ದಾರೆ.

ರಾಜು ಅವರ ನಿಧನದ ಸುದ್ದಿ ಕೇಳಿ ತೀವ್ರ ದುಃಖವಾಯಿತು‌. ಧಾರ್ಮಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ತಮ್ಮನ್ನು ತೊಡಗಿಸಿಕೊಂಡಿದ್ದರು. ರಾಜಣ್ಣನವರ ಅಗಲುವಿಕೆಯಿಂದ ಸಮಾಜಕ್ಕೆ, ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟವುಂಟಾಗಿದೆ. ಮೃತರ ಕುಟುಂಬಕ್ಕೆ ಅವರ ಸಾವಿನ ದುಃಖವನ್ನು ತಡೆದುಕೊಳ್ಳುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿಕೊಳ್ಳುವೆ ಎಂದು ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು