Sunday, January 19, 2025
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿಹಾಸನ

ಜಿಪಂ ಮಾಜಿ ಸದಸ್ಯೆ ಮೇಲೆ ಅತ್ಯಾಚಾರ ಪ್ರಕರಣ : ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್‌ – ಕಹಳೆ ನ್ಯೂಸ್

ಬೆಂಗಳೂರು: ಹಾಸನ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ.

ಈ ಹಿಂದೆ ಮೂರು ಪ್ರಕರಣಗಳಲ್ಲಿ ಜಾಮೀನು ಅರ್ಜಿ ವಜಾಗೊಂಡಿತ್ತು. ನಾಲ್ಕನೇ ಪ್ರಕರಣದ ಆದೇಶ ಬಾಕಿಯಿತ್ತು. ಇದೀಗ ನಾಲ್ಕನೇ ಪ್ರಕರಣದಲ್ಲೂ ಮಾಜಿ ಸಂಸದನಿಗೆ ಹೈಕೋರ್ಟ್ ಏಕಸದಸ್ಯ ಪೀಠ ಜಾಮೀನು ನಿರಾಕರಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ, ಅಶ್ಲೀಲ ವಿಡಿಯೋ ಸೇರಿದಂತೆ ಒಟ್ಟು 4 ಪ್ರಕರಣಗಳಿದ್ದು, 4ನೇ ಪ್ರಕರಣದಲ್ಲಿ ಜಾಮೀನು ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕ ಸದಸ್ಯ ಪೀಠ, ಜಾಮೀನು ಅರ್ಜಿ ವಜಾ ಮಾಡಿ, ಆದೇಶಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು