Sunday, January 19, 2025
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿಸಿಇಟಿಯಲ್ಲಿ ಮಂಗಳೂರು ವಿಭಾಗ ಮಟ್ಟದ ಪುರುಷರ ವಾಲಿಬಾಲ್ ಪಂದ್ಯಾಟ ನವೆಂಬರ್ 28 ರಂದು ನಡೆಯಲಿದೆ-ಕಹಳೆ ನ್ಯೂಸ್

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿAಗ್ ಎಂಡ್ ಟೆಕ್ನಾಲಜಿಯ ಆಶ್ರಯದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಮಂಗಳೂರು ವಿಭಾಗದ ಪುರುಷರ ವಾಲಿಬಾಲ್
ಪಂದ್ಯಾಟವು ನವೆಂಬರ್ 28 ರಂದು ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಲಿದೆ.

ನವೆಂಬರ್ 28 ಗುರುವಾರ ಬೆಳಿಗ್ಗೆ 9.30 ಕ್ಕೆೆ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ಪುತ್ತೂರು ತಾಲೂಕು ವಾಲಿಬಾಲ್ ಅಸೋಸಿಯೇಶನ್‌ನ ಅಧ್ಯಕ್ಷ ಸತೀಶ ರೈ ಕಟ್ಟಾವು ಕ್ರೀಡಾಕೂಟಕ್ಕೆ ಚಾಲನೆ ನೀಡಲಿದ್ದಾರೆ. ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕ ಸಂತೋಷ್ ಕುತ್ತಮೊಟ್ಟೆ ಗೌರವ ಅತಿಥಿಗಳಾಗಿ ಉಪಸ್ಥಿತರಿರುತ್ತಾರೆ. ಪ್ರಾಂಶುಪಾಲ ಡಾ.ಮಹೇಶ್‌ಪ್ರಸನ್ನ.ಕೆ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಎರಡು ವಾಲಿಬಾಲ್ ಅಂಕಣದಲ್ಲಿ ಈ ಸ್ಪರ್ಧೆಗಳು ನಡೆಯಲಿದ್ದು, ಮಂಗಳೂರು ವಿಭಾಗದ ವಿವಿಧ ಇಂಜಿನಿಯರಿAಗ್ ಕಾಲೇಜುಗಳ 18 ತಂಡಗಳು ಇದರಲ್ಲಿ ಭಾಗವಹಿಸುತ್ತವೆ ಎಂದು ಪ್ರಾಂಶುಪಾಲ ಡಾ.ಮಹೇಶ್‌ಪ್ರಸನ್ನ.ಕೆ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು