Recent Posts

Monday, January 20, 2025
ಸುದ್ದಿ

ಶಿಂದೋಳಿ ಗ್ರಾಮದಲ್ಲಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಪ್ರತಿಮೆ ಅನಾವರಣ : ಅಂಬೇಡ್ಕರ್ ಸಂವಿಧಾನವೇ ನಮಗೆ ಪವಿತ್ರ ಗ್ರಂಥ :ಸಚಿವೆ ಲಕ್ಷ್ಮೀ ಹೆಬ್ಬಾಳಕರ್ -ಕಹಳೆ ನ್ಯೂಸ್

ಬೆಳಗಾವಿ: ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಬರೆದಿರುವ ಸಂವಿಧಾನವೇ ನಮಗೆ ಪವಿತ್ರ ಗ್ರಂಥ. ಅದೇ ನಮಗೆ ಭಗವದ್ಗೀತೆ, ಕುರಾನ್, ಬೈಬಲ್ ಎಲ್ಲವೂ ಆಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅಭಿಪ್ರಾಯಪಟ್ಟಿದ್ದಾರೆ.

ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಬೆಳಗಾವಿ, ತಾಲೂಕು ಪಂಚಾಯತ್ ಬೆಳಗಾವಿ ಹಾಗೂ ಗ್ರಾಮ ಪಂಚಾಯತ್ ನಿಲಜಿ ಇವರ ಸಂಯುಕ್ತ ಆಶ್ರಯದಲ್ಲಿ ಶಿಂದೋಳಿ ಗ್ರಾಮದಲ್ಲಿ ನಿರ್ಮಾಣಗೊಂಡಿರುವ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆ ಅನಾವರಣಗೊಳಿಸಿ, ಬಳಿಕ ನಡೆದ ಸಮಾರಂಭ ಉದ್ಘಾಟಿಸಿ ಮಾತನಾಡಿದ ಸಚಿವರು, ಅಂಬೇಡ್ಕರ್ ಸಂವಿಧಾನ ನೀಡದಿದ್ದರೆ ದಲಿತರು ತಮ್ಮ ಕೇರಿಗಳಿಗಷ್ಟೇ ಸೀಮಿತವಾಗಿ ಬೀಡುತ್ತಿದ್ದರು, ಮಹಿಳೆಯರು ಅಡುಗೆ ಮನೆಗಷ್ಟೇ ಸೀಮಿತವಾಗುತ್ತಿದ್ದರು. ಇಂದು ನಾನು ಮಂತ್ರಿಯಾಗುವುದಕ್ಕೂ ಅದೇ ಸಂವಿಧಾನ ಕಾರಣ. ಅವರು ಹುಟ್ಟದಿದ್ದರೆ ಅದೇ ನೀಚ ಪದ್ಧತಿ ಇಂದಿಗೂ ಮುಂದುವರಿಯುತ್ತಿತ್ತು ಎಂದು ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಬಾಬಾಸಾಹೇಬ್ ಅಂಬೇಡ್ಕರ್ ರವರು ನಮ್ಮೆಲ್ಲರ ಪ್ರೇರಣೆ, ನಮ್ಮೆಲ್ಲರ ಮಾರ್ಗದರ್ಶಕ, ಅಂಬೇಡ್ಕರ್ ಅವರ ಬದುಕು, ತತ್ವ, ಆದರ್ಶಗಳು ನಮ್ಮೆಲ್ಲರ ಪಾಲಿಗೆ ಸಾರ್ವಕಾಲಿಕ ಮಾರ್ಗದರ್ಶಕವಾಗಿದೆ. ಜೀವನದಲ್ಲಿ ಅವುಗಳನ್ನು ಅಳವಡಿಸಿಕೊಳ್ಳುವುದೇ ಅವರಿಗೆ ನೀಡುವ ನಿಜವಾದ ಗೌರವವಾಗಿದೆ ಎಂದು ಸಚಿವರು ಹೇಳಿದರು. ‌

ಜಾಹೀರಾತು
ಜಾಹೀರಾತು
ಜಾಹೀರಾತು

ಅವರ ಆದರ್ಶ ಎಲ್ಲರ ಜೀವನಕ್ಕೆ ದಾರಿದೀಪ. ಬಾಬಾ ಸಾಹೇಬರ ಚಿಂತೆನೆಗಳು ಇಂದಿಗೂ, ಎಂದಿಗೂ ಯುವಜನತೆಗೆ ಸ್ಫೂರ್ತಿ. ಇಡೀ ವಿಶ್ವದಲ್ಲೇ ಶ್ರೇಷ್ಟ ಸಂವಿಧಾನ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದ್ದು ಅಂಬೇಡ್ಕರ್ ಅವರು ಕೊಟ್ಟ ಭಾರತದ ಸಂವಿಧಾನ, ಇಂತಹ ನಾಡಿನಲ್ಲಿ ಜೀವಿಸುತ್ತಿರುವುದೇ ನಮಗೆಲ್ಲ ದೊಡ್ಡ ಹೆಮ್ಮೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.

ಡಾ.ಬಾಬಾಸಾಹೇಬ ಅಂಬೇಡ್ಕರ್ ಅಂತಹ ಮಹಾನ್ ವ್ಯಕ್ತಿಯ ಪುತ್ಥಳಿಯನ್ನು ಇಂದು ಅತ್ಯಂತ ಸಂತೋಷದಿಂದ ಇಂದು ಅನಾವರಣ ಮಾಡಿದ್ದೇವೆ. ಅವರು ಎಂದರು.

ಸಮಾನತೆ ಮತ್ತು ಪ್ರಗತಿಯ ಕನಸು ಕಂಡ ಮೇರು ನಾಯಕ ಅವರು. ಅವರ ಆದರ್ಶ ಎಲ್ಲರ ಜೀವನಕ್ಕೆ ದಾರಿದೀಪ. ಬಾಬಾ ಸಾಹೇಬರ ಚಿಂತೆನೆಗಳು ಇಂದಿಗೂ, ಎಂದಿಗೂ ಯುವಜನತೆಗೆ ಸ್ಫೂರ್ತಿ. 1920ರಲ್ಲೇ ಎರಡೆರಡು ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪಡೆದ ಮಹಾನ್ ಚೇತನ ಅವರು. ಸಮಾಜದಲ್ಲಿ ಅಸಮಾನತೆ, ಅಸ್ಪೃಶ್ಯತೆ ತಾಂಡವವಾಡುತ್ತಿದ್ದ ಅಂದಿನ ದಿನಗಳಲ್ಲಿ ಅಮೇರಿಕಾದ ಕೊಲಂಬಿಯಾ ವಿಶ್ವವಿದ್ಯಾಲಯ ಮತ್ತು ಲಂಡನ್ ಸ್ಕೂಲ್ ಆಫ್ ಎಕಾನಾಮಿಕ್ಸ್ ನಿಂದ ಡಾಕ್ಟರೇಟ್ ಪದವಿ ಪಡೆದರು ಎಂದರೆ ಅವರ ಜೀವನೋತ್ಸಾಹ ಹೇಗಿತ್ತು ಎನ್ನುವುದನ್ನು ನಾವು ಊಹಿಸಲೂ ಸಾಧ್ಯವಾಗುವುದಿಲ್ಲ ಎಂದು ಸಚಿವರು ಅಂಬೇಡ್ಕರ್ ಅವರ ವ್ಯಕ್ತಿತ್ವವನ್ನು ಬಣ್ಣಿಸಿದರು.

ಕೆಲವರು ಸಂವಿದಾನ ಬದಲಾಯಿಸುತ್ತೇವೆ ಎಂದರು, ಕೆಲವರು ಸಂವಿಧಾನದ ಬಗ್ಗೆ ಏನೇನೋ ಮಾತನಾಡುತ್ತಿದ್ದಾರೆ. ಆದರೆ ನಾವು, ನಮ್ಮ ಸರಕಾರಕ್ಕೆ ಈ ಸಂವಿಧಾನವೇ ದಾರಿದೀಪವಾಗಿದೆ, ಮಾರ್ಗದರ್ಶಕವಾಗಿದೆ ಎಂದು ಸಚಿವರು ಹೇಳಿದರು.
ಕಾರ್ಯಕ್ರಮದಲ್ಲಿ ಬುಡಾ ಅಧ್ಯಕ್ಷರಾದ ಲಕ್ಷ್ಮಣರಾವ್ ಚಿಂಗಳೆ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ನಾಗೇಶ್ ದೇಸಾಯಿ, ಗಜಾನನ ಕಣಬರ್ಕರ್, ಸತೀಶ್ ಶಹಾಪೂರಕರ್, ವಿನಂತಿ ಗೊಮನಾಚಿ, ಶೀಲಾ ತಿಪ್ಪಣ್ಣಗೋಳ, ಸುರೇಶ ಪಾಟೀಲ, ಬಾಬು ಪಾಟೀಲ, ಪಿರಾಜಿ ಅನಗೋಳ್ಕರ್, ಗಂಗವ್ವ ಪೂಜೇರಿ, ಸುನಿತಾ ತಳವಾರ, ದೀಪಕ್ ಕೇತಕರ್, ಮಹೇಂದ್ರ ಗೋಟೆ, ಶಿವು ಸೈಬಣ್ಣವರ, ಗ್ರಾಮದ ಪ್ರಮುಖರು, ಪಕ್ಷದ ಅನೇಕ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.