Recent Posts

Sunday, January 19, 2025
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು : ಸಂತ ಫಿಲೋಮಿನಾ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ-ಕಹಳೆ ನ್ಯೂಸ್

ಪುತ್ತೂರು : ಸಂತ ಫಿಲೋಮಿನಾ (ಸ್ವಾಯತ್ತ) ಕಾಲೇಜಿನಲ್ಲಿ ಎನ್ ಎಸ್ ಎಸ್ ,ಎನ್ ಸಿ ಸಿ, ಮತ್ತು ಫೈನ್ ಪರ್ಫಾರ್ಮಿಂಗ್ ಆರ್ಟ್ಸ್ ಅಸೋಸಿಯೇಷನ್ ವತಿಯಿಂದ ನವೆಂಬರ್ 26, ರಂದು ಸ್ಪಂದನ ಸೆಮಿನಾರ್ ಹಾಲ್‌ನಲ್ಲಿ ಸಂವಿಧಾನ ದಿನವನ್ನು ಆಚರಿಸಲಾಯಿತು. ರಾಷ್ಟ್ರದ ಪ್ರಜಾಸತ್ತಾತ್ಮಕ ಚೌಕಟ್ಟಿನ ಮೂಲಾಧಾರವಾದ ಭಾರತದ ಸಂವಿಧಾನವನ್ನು
ಅAಗೀಕರಿಸಿದ ನೆನಪಿಗಾಗಿ ಈ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಕಾಲೇಜಿನ ಪ್ರಾಂಶುಪಾಲರಾದ ವಂದನೀಯ ಡಾ.ಆಂಟೋನಿ ಪ್ರಕಾಶ್ ಮೊಂತೇರೊ ವಿದ್ಯಾರ್ಥಿಗಳಿಗೆ ಸಾಂವಿಧಾನಿಕ ಪ್ರಮಾಣ ವಚನ ಬೋಧಿಸಿದರು. ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ, ಅವರು ನ್ಯಾಯಯುತ ಸಮಾಜವನ್ನು ರಚಿಸುವಲ್ಲಿ ಸಾಂವಿಧಾನಿಕ ತತ್ವಗಳು ಮತ್ತು ಕಟ್ಟುಪಾಡುಗಳ ಪ್ರಾಮುಖ್ಯತೆಯನ್ನು ಒತ್ತಿ ಹೇಳಿದರು. ಈ ಮಹಾನ್ ದೇಶದ ನಾಗರಿಕರಾದ ನಾವು ಸಂವಿಧಾನದ ಮೌಲ್ಯಗಳನ್ನು ಎತ್ತಿಹಿಡಿಯಬೇಕು ಮತ್ತು ಅದರ ನಿಯಮಗಳನ್ನು ಪಾಲಿಸಬೇಕು ಮತ್ತು ಕಲ್ಯಾಣ ಸಮಾಜವನ್ನು ನಿರ್ಮಿಸಬೇಕು ಎಂದು ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಪರ್ಫಾರ್ಮಿಂಗ್ ಆರ್ಟ್ಸ್ ಅಸೋಸಿಯೇಷನ್ ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಪ್ರಾರಂಭವಾಯಿತು. ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿ ಡಾ.ಚಂದ್ರಶೇಖರ ಕೆ. ಅವರು ಪ್ರಾಸ್ತಾವಿಕ ಮಾತುಗಳನ್ನಾಡುತ್ತಾ, ಸಂವಿಧಾನ ದಿವಸ್‌ನ ಮಹತ್ವವನ್ನು ಹೇಳಿದರು ಕಾರ್ಯಕ್ರಮದಲ್ಲಿ ಲಲಿತ ಮತ್ತು ಪರ್ಫಾರ್ಮಿಂಗ್ ಆರ್ಟ್ಸ್ ಅಸೋಸಿಯೇಷನ್ ನಿರ್ದೇಶಕ ಪ್ರಶಾಂತ ರೈ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.