Thursday, November 28, 2024
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಾಲಿಬಾಲ್ ಒಂದು ಪ್ರಾಚೀನ ಕ್ರೀಡೆ. ದೈಹಿಕ ಮತ್ತು ಮಾನಸಿಕ ಕ್ಷಮತೆಯನ್ನು ಬಯಸುವ ಈ ಕ್ರೀಡೆಗೆ ಇತ್ತಿಚಿನ ದಿನಗಳಲ್ಲಿ ಪ್ರೋತ್ಸಾಹ ಕಡಿಮೆಯಾಗುತ್ತಿರುವುದು ಖೇದಕರ-ಸತೀಶ್ ರೈ ಕಟ್ಟಾವು-ಕಹಳೆ ನ್ಯೂಸ್

ಪುತ್ತೂರು: ವಾಲಿಬಾಲ್ ಒಂದು ಪ್ರಾಚೀನ ಕ್ರೀಡೆ. ದೈಹಿಕ ಮತ್ತು ಮಾನಸಿಕ ಕ್ಷಮತೆಯನ್ನು ಬಯಸುವ ಈ ಕ್ರೀಡೆಗೆ ಇತ್ತಿಚಿನ ದಿನಗಳಲ್ಲಿ ಪ್ರೋತ್ಸಾಹ ಕಡಿಮೆಯಾಗುತ್ತಿರುವುದು ಖೇದಕರ ಎಂದು ಪುತ್ತೂರು ವಾಲಿಬಾಲ್ ಅಸೋಸಿಯೇಶನ್‌ನ ಅಧ್ಯಕ್ಷ ಸತೀಶ್ ರೈ ಕಟ್ಟಾವು ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿAಗ್ ಎಂಡ್ ಟೆಕ್ನಾಲಜಿಯ ಆಶ್ರಯದಲ್ಲಿ ನಡೆಯುತ್ತಿರುವ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಮಂಗಳೂರು ವಿಭಾಗದ ಪುರುಷರ ವಾಲಿಬಾಲ್ ಪಂದ್ಯಾಟಕ್ಕೆ
ಚಾಲನೆ ನೀಡಿ ಮಾತಾಡಿದರು. ಅತಿ ಕಡಿಮೆ ಪರಿಕರ ಹಾಗೂ ಜಾಗದ ಅವಶ್ಯಕತೆ ಉಳ್ಳ ಈ ಕ್ರೀಡೆಯನ್ನು ಉಳಿಸಿ ಬೆಳೆಸುವ ಜವಾಬ್ಧಾರಿ ಇಂದಿನ ಯುವಜನತೆಗೆ ಇದೆ ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಗೌರವ ಅತಿಥಿಗಳಾಗಿ ಆಗಮಿಸಿದ ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕ ಸಂತೋಷ್ ಕುತ್ತಮೊಟ್ಟೆ ಮಾತನಾಡಿ ಮನಸ್ಸಿನ ಒತ್ತಡವನ್ನು ಕಡಿಮೆಗೊಳಿಸುವ ಕ್ರೀಡೆಗಳು ಶಾರೀರಿಕ ಉತ್ತೇಜನವನ್ನು ನೀಡುತ್ತವೆ. ಇಂಜಿನಿಯರಿAಗ್‌ನAತಹ
ವೃತ್ತಿಪರ ಕಲಿಕಾ ವಿಭಾಗಗಳಲ್ಲಿ ಕ್ರೀಡಾಕೂಟಗಳನ್ನು ಸಂಘಟಿಸುವುದು ಮತ್ತು ಅದರಲ್ಲಿ ಪಾಲ್ಗೊಳ್ಳುವುದು ಕಷ್ಟಕರ. ಈ ಕ್ರೀಡಾಕೂಟದಲ್ಲಿ ಭಾಗವಹಿಸಿದ ಎಲ್ಲರೂ ಅಭಿನಂದನಾರ್ಹರು ಎಂದರು.

ಸಮಾರAಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ.ಮಹೇಶ್‌ಪ್ರಸನ್ನ.ಕೆ ಮಾತನಾಡಿ ಶತಮಾನಕ್ಕೂ ಹಿಂದೆ ಬೇಸ್‌ಬಾಲ್ ಆಡುವುದಕ್ಕೆ ಕಷ್ಟವಾದ ಸಂದರ್ಭದಲ್ಲಿ ಹುಟ್ಟಿಕೊಂಡ ವಾಲಿಬಾಲ್ ಪಂದ್ಯಾಟ ನಂತರದ ದಿನಗಳಲ್ಲಿ
ಹೆಚ್ಚು ಜನಪ್ರಿಯತೆಯನ್ನು ಹೊಂದಿತು ಎಂದರು. ಇಂತಹ ಕ್ರೀಡಾಕೂಟದ ಆಯೋಜನೆಗೆ ಕಾಲೇಜು ಸದಾ ಪ್ರೋತ್ಸಾಹವನ್ನು ನೀಡುತ್ತಿದ್ದು ಈ ವರ್ಷ ಮಂಗಳೂರು ವಿಭಾಗ ಮಟ್ಟದ ಖೋಖೋ, ಕಬಡ್ಡಿ ಹಾಗೂ ವಾಲಿಬಾಲ್
ಪಂದ್ಯಾಟಗಳನ್ನು ಆಯೋಜಿಸಿದೆ ಎಂದರು.

ಪೆರ್ಲAಪಾಡಿಯ ಷಣ್ಮುಖದೇವ ಪ್ರೌಡಶಾಲೆಯ ಸಂಚಾಲಕ ಶಿವರಾಮ ಭಟ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.