Sunday, January 19, 2025
ಬೆಂಗಳೂರುಸುದ್ದಿ

ಚೆನ್ನೈ ಏರ್‌ಪೋರ್ಟ್‌ನಿಂದ 13 ವಿಮಾನಗಳ ಯಾನ ರದ್ದು, ರೈಲು ಸೇವೆಯಲ್ಲೂ ವ್ಯತ್ಯಯ ; ವಿಪತ್ತು ನಿರ್ವಹಣಾ ಪಡೆ ಸಿದ್ಧ – ಕಹಳೆ ನ್ಯೂಸ್

– ಅಬುದಾಬಿಯಿಂದ ಚೆನ್ನೈಗೆ ಹೊರಟಿದ್ದ ವಿಮಾನ ಬೆಂಗಳೂರಿಗೆ ಡೈವರ್ಟ್‌
– ರೈಲು ಸೇವೆಯಲ್ಲೂ ವ್ಯತ್ಯಯ ; ವಿಪತ್ತು ನಿರ್ವಹಣಾ ಪಡೆ ಸಿದ್ಧ

ಚೆನ್ನೈ: ಫೆಂಗಲ್ ಚಂಡಮಾರುತ (Cyclone Fengal) ತೀವ್ರತೆ ಪಡೆದುಕೊಂಡಿದೆ. ಚೆನ್ನೈನಲ್ಲಿ ಭಾರಿ ಮಳೆಯಿಂದಾಗಿ (Heavy Rain In Chennai) ವಿಮಾನ ಮತ್ತು ರೈಲು ಸೇವೆಗಳಲ್ಲಿ ಭಾರಿ ವ್ಯತ್ಯಯ ಉಂಟಾಗಿದೆ.

ಮಳೆಯ ಅಬ್ಬರದಿಂದಾಗಿ ಚೆನ್ನೈ ವಿಮಾನ ನಿಲ್ದಾಣದಲ್ಲಿ 10ಕ್ಕೂ ಹೆಚ್ಚು ಆಗಮನ ಮತ್ತು ನಿರ್ಗಮನ ರದ್ದುಗೊಳಿಸಲಾಗಿದೆ. ಇಂಡಿಯೋ ತನ್ನ ಎಲ್ಲಾ ಆಗಮನ ಮತ್ತು ನಿರ್ಗಮನ ವಿಮಾನ (flights) ಕಾರ್ಯಾಚರಣೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಇದರೊಂದಿಗೆ ಅಬುದಾಬಿಯಿಂದ ಚೆನ್ನೈಗೆ ತೆರಳಬೇಕಿದ್ದ ಇಂಡಿಗೋ ವಿಮಾನವನ್ನು (6E1412) ಪ್ರತಿಕೂಲ ಹವಾಮಾನದಿಂದಾಗಿ ಬೆಂಗಳೂರಿಗೆ ತಿರುಗಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಚಂಡಮಾರುತದಿಂದಾಗಿ ತಿರುವಳ್ಳೂರು, ಕಾಂಚೀಪುರಂ, ಕಲ್ಲಕುರಿಚಿ, ಮತ್ತು ತಮಿಳುನಾಡಿನ ಕಡಲೂರು ಜಿಲ್ಲೆಗಳು ಮತ್ತು ಪುದುಚೇರಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಾರೈಕಲ್ ಮತ್ತು ಮಹಾಬಲಿಪುರಂ ನಡುವೆ ಭೂಕುಸಿತ ಉಂಟುಮಾಡುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ವಿಪತ್ತು ನಿರ್ವಹಣಾ ಪಡೆ ಸಿದ್ಧ :

ತಮಿಳುನಾಡು ಕಂದಾಯ ಮತ್ತು ವಿಪತ್ತು ನಿರ್ವಹಣಾ ಇಲಾಖೆಯು ಈಗಾಗಲೇ ಮುನ್ನೆಚ್ಚರಿಕಾ ಕ್ರಮದ ಭಾಗವಾಗಿ ರಾಜ್ಯಾದ್ಯಂತ 2,229 ಪರಿಹಾರ ಶಿಬಿರಗಳನ್ನು ಸ್ಥಾಪಿಸಿದೆ. ಚಂಡಮಾರುತದ ಹಿನ್ನೆಲೆಯಲ್ಲಿ ಆಶ್ರಯ ಅಗತ್ಯವಿರುವವರಿಗೆ ಸಂಪನ್ಮೂಲಗಳನ್ನು ಸಂಗ್ರಹಿಸಲಾಗಿದೆ. ಈವರೆಗೆ ತಿರುವಳ್ಳೂರು ಮತ್ತು ನಾಗಪಟ್ಟಿಣಂ ಜಿಲ್ಲೆಗಳಲ್ಲಿ 164 ಕುಟುಂಬಗಳ 471 ಜನರನ್ನು ಈಗಾಗಲೇ ಪರಿಹಾರ ಕೇಂದ್ರಗಳಲ್ಲಿ ಇರಿಸಲಾಗಿದೆ. ಸಂಭವನೀಯ ಪ್ರವಾಹದ ನಿರೀಕ್ಷೆಯಲ್ಲಿ ಸ್ಥಳೀಯ ಅಧಿಕಾರಿಗಳು ಮೋಟಾರ್ ಪಂಪ್‌ಗಳು, ಜನರೇಟರ್‌ಗಳು ಮತ್ತು ದೋಣಿಗಳು ಸೇರಿದಂತೆ ಅಗತ್ಯ ಸಾಧನಗಳನ್ನು ಸಿದ್ಧಪಡಿಸಲಾಗಿದೆ. ಇದರೊಂದಿಗೆ ಎನ್‌ಡಿಆರ್‌ಎಫ್‌ ಹಾಗೂ ವಿಪತ್ತು ನಿರ್ವಹಣಾ ಪಡೆಗಳನ್ನ ಚೆನ್ನೈ, ಕಡಲೂರು ಮತ್ತು ಮೈಲಾಡುತುರೈ ಮುಂತಾದ ಪೀಡಿತ ಪ್ರದೇಶಗಳಿಗೆ ನಿಯೋಜಿಸಿದ್ದಾರೆ.

 

ಐಟಿ ಕಂಪನಿಗಳಿಗೆ ವರ್ಕ್‌ ಫ್ರಮ್‌ ಹೋಮ್‌ :

ಈಗಾಗಲೇ ತಮಿಳುನಾಡಿನಲ್ಲಿ ಅಧಿಕಾರಿಗಳು ಸುರಕ್ಷತಾ ಕ್ರಮಗಳನ್ನು ಜಾರಿಗೊಳಿಸಿದ್ದಾರೆ. ಫೆಂಗಲ್ ಚಂಡಮಾರುತವು ಭಾರಿ ಮಳೆ ತರಲಿದ್ದು ಮತ್ತು ಗಂಟೆಗೆ 70 ರಿಂದ 90 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ. ಹೀಗಾಗಿ ರಾಜ್ಯ ಸರ್ಕಾರ ಚೆನ್ನೈ, ತಿರುವಳ್ಳೂರು, ಕಾಂಚೀಪುರಂ ಮತ್ತು ಚೆಂಗಲ್ಪಟ್ಟು ಜಿಲ್ಲೆಗಳ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದೆ. ಸಾರ್ವಜನಿಕ ಸಾರಿಗೆ ಸೇವೆಗಳನ್ನು ಸ್ಥಗಿತಗೊಳಿಸಿದೆ. ಐಟಿ ಕಂಪನಿಗಳು ಮನೆಯಿಂದಲೇ ಕೆಲಸ ಮಾಡುವ ನಿಯಮ ಜಾರಿಗೊಳಿಸುವಂತೆ ಸೂಚಿಸಿದೆ.

ಮಳೆ ಮುನ್ಸೂಚನೆ ಹೊಂದಿರುವ ಇತರ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಸ್ಥಳೀಯ ಹವಾಮಾನ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ನಿರ್ಧಾರ ತೆಗೆದುಕೊಳ್ಳುವಂತೆ ರಾಜ್ಯ ಸರ್ಕಾರ ಸೂಚಿಸಿದೆ.