ಉಡುಪಿ: ಶಿಕ್ಷಣದ ಜೊತೆಗೆ ಸಾಂಸ್ಕೃತಿಕ ಮತ್ತು ಕ್ರೀಡಾ ಕ್ಷೇತ್ರಗಳಲ್ಲಿಯೂ ಗಣನೀಯವಾಗಿ ಸಾಧನೆಗೈಯಲು ಪ್ರೋತ್ಸಾಹ ನೀಡುತ್ತಾ ಈಗಾಗಲೇ ಉಡುಪಿ ಜಿಲ್ಲೆಯಲ್ಲಿ ಮನೆಮಾತಾಗಿರುವ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳು ನಿಜವಾಗಿಯೂ ಮಾನವ ಸಂಪನ್ಮೂಲ ಅಭಿವೃದ್ಧಿಗೆ ಅತ್ಯಮೂಲ್ಯ ಕೊಡುಗೆ ಕೊಡುತ್ತಿದೆ. ಇಂತಹ ಸಂಸ್ಕಾರಯುತ ಶಿಕ್ಷಣ ಪಡೆದ ವಿದ್ಯಾರ್ಥಿ ಸಮೂಹ ದೇಶದ ಬಲವರ್ದನೆಗೆ ದುಡಿಯಬೇಕು ಎಂದು ಎನ್.ಎಸ್.ಎಸ್. ಮಾಜಿ ರಾಜ್ಯ ಸಂಯೋಜನಾಧಿಕಾರಿಗಳು, ನಿವೃತ್ತ ಪ್ರಾಂಶುಪಾಲರಾಗಿರುವ ಡಾ.ಗಣನಾಥ ಎಕ್ಕಾರು ಹೇಳಿದರು. ಅವರು ಉಡುಪಿ ಜ್ಞಾನಸುಧಾ ಮತ್ತು ಮಣಿಪಾಲ ಜ್ಞಾನಸುಧಾ ಜಂಟಿ ಕಾಲೇಜು ವಾರ್ಷಿಕೋತ್ಸವ ಜ್ಞಾನಸಂಭ್ರಮ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡುತ್ತಿದ್ದರು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಇಲ್ಲಿನ ವೈದ್ಯಕೀಯ ಅಧೀಕ್ಷಕರಾದ ಡಾ.ಅವಿನಾಶ್ ಶೆಟ್ಟಿ ಮಾತನಾಡಿ ದೇಶವನ್ನು ಬಲಗೊಳಿಸಲು ಉತ್ತಮ ಶಿಕ್ಷಣ ಮತ್ತು ಉತ್ತಮ ಆರೋಗ್ಯ ಮುಖ್ಯ. ನಾವು ಜವಾಬ್ದಾರಿಯುತ ನಾಗರಿಕರಾಗಿ ಹುಟ್ಟಿದ ನಾಡಿಗೆ ಕೊಡುಗೆ ಕೊಡುವಂತಾಗಬೇಕು. ಡಾ.ಸುಧಾಕರ ಶೆಟ್ಟಿಯವರು ಉತ್ತಮ ಶಿಕ್ಷಣ ತಜ್ಞರಾಗಿ ಶೈಕ್ಷಣಿಕ ಕ್ಷೇತ್ರಕ್ಕೆ ಬಹುಮುಖ್ಯ ಕೊಡುಗೆ ನೀಡುತ್ತ ಬಂದಿರುವುದು ಶ್ಲಾಘನೀಯ ಎಂದರು.
ಈ ಕಾರ್ಯಕ್ರಮದಲ್ಲಿ ಅಜೆಕಾರು ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಅಧ್ಯಕ್ಷರಾದ ಡಾ. ಸುಧಾಕರ ಶೆಟ್ಟಿಯವರು ಪ್ರಾಸ್ತಾವಿಕವಾಗಿ ಮಾತನಾಡಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಗಣ್ಯರ ಆದರ್ಶ ಹಾಗೂ ಕಾಯಕವನ್ನೇ ಕೈಲಾಸವಾಗಿಸಿಕೊಂಡ ಅವರ ಜೀವನ ಮೌಲ್ಯಗಳು ನಮಗೆ ಅನುಕರಣೀಯ ಎಂದರು. ಇದೇ ಸಂದರ್ಭದಲ್ಲಿ ಚೆಸ್‌ನಲ್ಲಿ ರಾಷ್ಟçಮಟ್ಟದ ಪಂದ್ಯಾವಳಿಯಲ್ಲಿ ಭಾಗವಹಿಸಿದ ಉಡುಪಿ ಜ್ಞಾನಸುಧಾ ವಿದ್ಯಾರ್ಥಿ ನಿಖಿಲ್ ವಿಕ್ರಮ್ ಅವರನ್ನು ಸನ್ಮಾನಿಸಲಾಯಿತು. ರಾಜ್ಯ ಮಟ್ಟದ ಕ್ರೀಡಾ ಪ್ರತಿಭೆಗಳನ್ನು, ವಿವಿಧ ಸ್ಪರ್ಧೆಗಳಲ್ಲಿ ವಿಜೇತರನ್ನು ಸನ್ಮಾನಿಸಲಾಯಿತು. ಮಣಿಪಾಲ್ ಟ್ರಸ್ಟ್ನ ಕರೆಸ್ಪೋಂಡೆAಟ್ ಶ್ರೀ ಪ್ರಕಾಶ್ ಶೆಟ್ಟಿ, ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು ಕಾರ್ಕಳ ಜ್ಞಾನಸುಧಾ ಪ.ಪೂ.ಕಾಲೇಜಿನ ಪ್ರಾಂಶುಪಾಲರಾದ ಶ್ರೀ ದಿನೇಶ್ ಎಂ ಕೊಡವೂರು, ಉಡುಪಿ ಜ್ಞಾನಸುಧಾ ಪ.ಪೂ ಕಾಲೇಜಿನ ಉಪ ಪ್ರಾಂಶುಪಾಲರಾದ ಶ್ರೀ ಪ್ರಕಾಶ್ ಜೋಗಿ, ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಸಾರ್ವಜನಿಕ ಸಂಪರ್ಕಾಧಿಕಾರಿ ಶ್ರೀಮತಿ ಜ್ಯೋತಿ ಪದ್ಮನಾಭ ಭಂಡಿ ವೇದಿಕೆಯಲ್ಲಿದ್ದರು. ಅಜೆಕಾರು ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಟ್ರಸ್ಟಿಗಳಾದ ಶ್ರೀಮತಿ ವಿದ್ಯಾವತಿ ಎಸ್ ಶೆಟ್ಟಿ, ಕಾರ್ಕಳ ಜ್ಞಾನಸುಧಾ ಪ್ರೌಢ ಶಾಲೆಯ ಉಪಪ್ರಾಂಶುಪಾಲರಾದ ಶ್ರೀಮತಿ ವಾಣಿ ಕೆ, ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಡೀನ್ ಅಕಾಡೆಮಿಕ್ಸ್ ಡಾ.ಮಿಥುನ್ ಯು ಮುಂತಾದವರು ಉಪಸ್ಥಿತರಿದ್ದರು.
ಉಡುಪಿ ಜ್ಞಾನಸುಧಾ ಪ.ಪೂ.ಕಾಲೇಜಿನ ಪ್ರಾಂಶುಪಾಲರಾದ ಸಂತೋ಼ಷ್ ಸ್ವಾಗತಿಸಿ, ಮಣಿಪಾಲ ಜ್ಞಾನಸುಧಾ ಪ.ಪೂ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಗಣೇಶ್ ಶೆಟ್ಟಿ ವಂದಿಸಿದರು. ಮಣಿಪಾಲ
ಜ್ಞಾನಸುಧಾದ ಆಂಗ್ಲ ಭಾಷಾ ಉಪನ್ಯಾಸಕಿ ಶ್ರೀಮತಿ ಶಮಿತಾ ಕಾರ್ಯಕ್ರಮ ನಿರೂಪಿಸಿದರು.
ಡಾ.ಅವಿನಾಶ್ ಶೆಟ್ಟಿ, ವೈದ್ಯಕೀಯ ಅಧೀಕ್ಷಕರು ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲ ಮತ್ತು ಪ್ರಾಧ್ಯಾಪಕರು ಸಮುದಾಯ ಔಷಧ ಕೇಂದ್ರ ಡಾ. ಗಣಪತಿ ಎಕ್ಕಾರ್ ನಿವೃತ್ತ ಎನ್.ಎಸ್.ಎಸ್. ಅಧಿಕಾರಿಗಳು ಮತ್ತು ಮಾಜಿ ಜಂಟಿ ಕಾರ್ಯದರ್ಶಿಗಳು ಕರ್ನಾಟಕ ಸರ್ಕಾರ ಈ ಕಾರ್ಯಕ್ರಮದಲ್ಲಿ ಅಜೆಕಾರು ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಟ್ರಸ್ಟಿಗಳಾದ ಶ್ರೀಮತಿ ವಿದ್ಯಾವತಿ ಸುಧಾಕರ ಶೆಟ್ಟಿ, ಅನಿಲ್ ಕುಮಾರ್ ಜೈನ್, ಸಿ.ಎ.ನಿತ್ಯಾನಂದ ಪ್ರಭು, ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿರುವ ದಿನೇಶ್ ಎಂ ಕೊಡವೂರು, ಉಡುಪಿ ಜ್ಞಾನಸುಧಾ ಪ.ಪೂ.ಕಾಲೇಜಿನ ಪ್ರಾಂಶುಪಾಲರಾದ ಸಂತೋ಼ಷ್, ಮಣಿಪಾಲ ಜ್ಞಾನಸುಧಾ ಪ.ಪೂ ಕಾಲೇಜಿನ ಪ್ರಾಂಶುಪಾಲರಾದ ಗಣೇಶ್, ಉಪಪ್ರಾಂಶುಪಾಲರಾದ ಪ್ರಕಾಶ್ ಜೋಗಿ, ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಸಾರ್ವಜನಿಕ ಸಂಪರ್ಕಾಧಿಕಾರಿ ಜ್ಯೋತಿ ಪದ್ಮನಾಭ ಭಂಡಿ, ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಡೀನ್ ಅಕಾಡೆಮಿಕ್ಸ್ ಡಾ.ಮಿಥುನ್ ಯು ಮುಂತಾದವರು ಉಪಸ್ಥಿತರಿದ್ದರು.
ಮಣಿಪಾಲ ಜ್ಞಾನಸುಧಾದ ಆಂಗ್ಲ ಭಾಷಾ ಉಪನ್ಯಾಸಕಿ ಶ್ರೀಮತಿ ಶಮಿತಾ ಕಾರ್ಯಕ್ರಮ ನಿರೂಪಿಸಿದರು.