Thursday, December 5, 2024
ರಾಜ್ಯಸುದ್ದಿ

ಸತತ 5ನೇ ಬಾರಿಗೆ HSRP ನಂಬರ್ ಪ್ಲೇಟ್ ಅಳವಡಿಕೆ ಗಡುವು ವಿಸ್ತರಿಸಿದ ರಾಜ್ಯ ಸರ್ಕಾರ..!-ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ಖಡ್ಡಾಯವಾಗಿ ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಕೆಗ ಮಾಡಬೇಕು ಎಂದು ಸರ್ಕಾರ ಈಗಾಗಲೇ ಆದೇಶಿಸಿದ್ದು, ಇದಕ್ಕಾಗಿ ಗಡುವನ್ನೂ ನೀಡಿತ್ತು. ಇದೀಗ ಈ ಅವಧಿಯನ್ನು ಮತ್ತಷ್ಟು ವಿಸ್ತರಿಸಿ ಆದೇಶಿಸಿದೆ. ಈ ಹಿಂದೆ ಡಿಸೆಂಬರ್ 4ಕ್ಕೆ ಕೊನೇ ದಿನಾಂಕ ನೀಡಿತ್ತು.

ಆದರೆ ಇದೀಗ ಮತ್ತೆ ರಾಜ್ಯ ಸರ್ಕಾರ ಗುಡುವನ್ನು ವಿಸ್ತರಣೆ ಮಾಡಲು ಮುಂದಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಬಗ್ಗೆ ಇಂದು ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದ್ದು,HSRP ನಂಬರ್ ಪ್ಪ್ಲೇಟ್ ಗಳನ್ನು ಮಾಲೀಕರು ತಮ್ಮ ತಮ್ಮ ವಾಹನಗಳಿಗೆ ಅಳವಡಿಸಿಕೊಳ್ಳಲು ಈ ಹಿಂದೆ ಆಗಸ್ಟ್ 17ರವರೆಗೆ ಅವಕಾಶ ನೀಡಲಾಗಿತ್ತು.ಆ ನಂತರ ಈ ಅವಧಿಯನ್ನು ದಿನಾಂಕ ನವೆಂಬರ್ 30ರವರೆಗೆ ವಿಸ್ತರಿಸಲಾಗಿತ್ತು. ಆ ನಂತರ ಮತ್ತೆ ಇತ್ತೀಚೆಗಷ್ಟೇ ಹೈಕೋರ್ಟ್ ಡಿಸೆಂಬರ್ 3ರ ವರಗೆ ಗಡುವು ನೀಡಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು

ಇದೀಗ ಹೈ ಸೆಕ್ಯುರಿಟಿ ರಿಜಿಸ್ಟ್ರೇಶನ್ ಪ್ಲೇಟ್ ನೋಂದಣಿಯ ಕೊನೆಯ ದಿನಾಂಕವನ್ನು 2024ರ ಡಿಸೆಂಬರ್ 31ರ ವರೆಗೆ ವಿಸ್ತರಣೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಮೂಲಕ 5ನೇ ಬಾರಿಗೆ ಗಡುವು ವಿಸ್ತರಿಸಲಾಗಿದೆ.