ಪ್ರತಿಭಾ ಕಾರಂಜಿ ಲಿಟ್ಲ್ ಫ್ಲವರ್ ಶಾಲಾ ವಿದ್ಯಾರ್ಥಿ ಚಂದನ್ ಕೃಷ್ಣ ಜಿಲ್ಲಾ ಮಟ್ಟಕ್ಕೆ ಆಯ್ಕೆ -ಕಹಳೆ ನ್ಯೂಸ್
ಪುತ್ತೂರು : ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ಮತ್ತು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ನೇತೃತ್ವದಲ್ಲಿ ನಡೆದ ಪುತ್ತೂರು ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಧಾರ್ಮಿಕ ಪಠಣ ಸಂಸ್ಕೃತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಹೋಲಿ ರಿಮೆಂಡೀರ್ ಶಾಲೆ, ಬೆಳ್ತಂಗಡಿಯಲ್ಲಿ ನಡೆಯುವ ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಇವರು ಲಿಟ್ಲ್ ಫ್ಲವರ್ ಶಾಲಾ ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷರಾದ ರಾಮಚಂದ್ರ ಭಟ್ ಹಾಗೂ ಮಾನಸ ಭಟ್ ಪದ್ಯಾಣ ರವರ ಸುಪುತ್ರ.