ಚಿಕ್ಕಮಗಳೂರು: ಶಾಲಾ ಪ್ರವಾಸ ಹಿನ್ನೆಲೆಯಲ್ಲಿ ಶೃಂಗೇರಿಗೆ ಆಗಮಿಸುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದ್ದು, ಓರ್ವ ವಿದ್ಯಾರ್ಥಿನಿ ಮೃತಪಟ್ಟು, 20ಕ್ಕೂ ಹೆಚ್ಚು ಮಕ್ಕಳಿಗೆ ಗಾಯವಾಗಿದೆ.
ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ಬಾಳೆಕೊಪ್ಪ ಸಮೀಪ ಈ ಘಟನೆ ನಡೆದಿದೆ. ಸ್ಥಳದಲ್ಲಿಯೇ ದಿಯಾ(16) ಎಂಬ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಪರ‍್ಣಪ್ರಜ್ಞಾ ಶಾಲೆಗೆ ಸೇರಿದ ಬಸ್ ಎನ್ನಲಾಗಿದ್ದು, ಶಾಲಾ ಪ್ರವಾಸ ಹಿನ್ನೆಲೆ ಶೃಂಗೇರಿಗೆ ಆಗಮಿಸುತ್ತಿತ್ತು.
ಗಾಯಾಳುಗಳನ್ನು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ. ಎನ್.ಆರ್.ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.