ಪುತ್ತೂರು : ನೆಲ್ಲಿಕಟ್ಟೆ ಖಾಸಗಿ ಬಸ್ ನಿಲ್ದಾಣದ ಬಳಿ ಇರುವ ನಾಗನ ಕಟ್ಟೆಯ ಗೇಟ್ ಬೀಗ ಗಳನ್ನು ಮುರಿದು ಹಾನಿ ಮಾಡಿದ ಘಟನೆಯೊಂದು ನಡೆದಿದೆ.
ಹಾನಿಮಾಡಿದ ವ್ಯಕ್ತಿಯು ಜಿಡೆಕಲ್ಲು ನಿವಾಸಿ ಮಹಮ್ಮದ್ ಸಲಾಂ ಎಂದು ಗುರುತಿಸಲಾಗಿದೆ.
ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಸಮೀಪ ಇರುವ ನೆಲ್ಲಿಕಟ್ಟೆಯ ನಾಗನಕಟ್ಟೆಗೆ ಏಕಾಏಕಿ ನುಗ್ಗಿದ ಸಲಾಂ ಗೇಟ್ ಹಾಗು ಇತರ ಸಾಮಾಗ್ರಿಗಳಿಗೆ ಹಾನಿ ಮಾಡಿದ್ದಾನೆ. ನಿನ್ನೆ ರಾತ್ರಿ ವೇಳೆ ಈ ಘಟನೆ ನಡೆದಿದ್ದು, ಸ್ಥಳೀಯರು ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಸ್ಥಳೀಯ ನಗರಸಭಾ ಸದಸ್ಯ ಹಾಗೂ ನಾಗನ ಕಟ್ಟೆ ಸಮಿತಿಯ ಪದಾಧಿಕಾರಿಗಳು ಭಕ್ತರು ನೀಡಿದ ದೂರಿನ ಮೇರೆಗೆ ಪುತ್ತೂರು ನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.
ಹೆಚ್ಚಿನಮಾಹಿತಿ ತನಿಕೆಯ ನಂತರ ತಿಳಿಯಲಿದೆ.