ಪುತ್ತೂರು: ಬೆಟ್ಟಂಪಾಡಿ ಗ್ರಾಮದ ಕಕ್ಕೂರು ಪ್ರದೇಶದಲ್ಲಿ ಪುತ್ತೂರಿನ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥೆಯಿಂದ ನಿರ್ಮಾಣಗೊಂಡ ಬಸ್ ತಂಗುದಾಣ-ಕಹಳೆ ನ್ಯೂಸ್
ಪುತ್ತೂರು: ಬೆಟ್ಟಂಪಾಡಿ ಗ್ರಾಮದ ಕಕ್ಕೂರು ಪ್ರದೇಶದಲ್ಲಿ ಪುತ್ತೂರಿನ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ನಿರ್ಮಾಣಗೊಂಡ ಸುಸಜ್ಜಿತ ಬಸ್ ತಂಗುದಾಣವನ್ನು ಡಿ.5ರಂದು ಉದ್ಘಾಟಿಸಿದರು. ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥೆಯ ಆಡಳಿತ ನಿರ್ದೇಶಕ ಬಲರಾಮ ಆಚಾರ್ಯರವರು ರಿಬ್ಬನ್ ಕಟ್ ಮಾಡಿ ಬಸ್ ತಂಗುದಾಣ ಉದ್ಘಾಟಿಸಿ ಮಾತನಾಡಿದರು. ಇವತ್ತು ಹಳ್ಳಿಗಳು ನಗರೀಕರಣಗೊಳ್ಳುತ್ತಿದೆ ಇಂತಹ ಸಂದರ್ಭದಲ್ಲಿ ಮೂಲಭೂತ ಸೌಕರ್ಯಗಳು ಅಗತ್ಯ ಇದೆ. ಎಲ್ಲ ಸೌಲಭ್ಯವನ್ನು ಸರಕಾರ ನೀಡಲು ಸಾಧ್ಯವಿಲ್ಲ. ನಾವು ಕೂಡ ಒಟ್ಟಿಗೆ ಸೇರಬೇಕಾಗುತ್ತದೆ. ಈ ಪರಿಸರದಲ್ಲಿ ಸುಸಜ್ಜಿತ ಬಸ್ ತಂಗುದಾಣದ ಬೇಡಿಕೆ ಬಂದಿತ್ತು. ಈ ಬೇಡಿಕೆಯನ್ನು ಸಂತೋಷದಿಂದ ಒಪ್ಪಿಕೊಂಡಿದ್ದೇವೆ. ಕೌಶಲ್ ಮೀಡಿಯದವರು ತುಂಬಾ ಉತ್ತಮವಾಗಿ ನಿರ್ಮಾಣ ಮಾಡಿದ್ದಾರೆ ಎಂದು ಹೇಳಿದ ಅವರು ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.
ಬೆಟ್ಟಂಪಾಡಿ ಗ್ರಾಮ ಪಂಚಾಯತ್ ಸದಸ್ಯ ಪ್ರಕಾಶ್ ರೈ ಬೈಲಾಡಿ ಮಾತನಾಡಿ ಬಸ್ ತಂಗುದಾಣದ ನಿರ್ಮಾಣ ಹಲವು ಸಮಯದ ಹಿಂದಿನ ಬೇಡಿಕೆ. ಗ್ರಾಮ ಪಂಚಾಯತ್‌ನಲ್ಲಿ ಅನುದಾನದ ಕೊರತೆಯಿಂದ ತಂಗುದಾಣ ನಿರ್ಮಾಣ ಮಾಡಲು ಸಾಧ್ಯವಾಗಿಲ್ಲ. ಈಗ ಜಿ.ಎಲ್.ಆಚಾರ್ಯ ಸಂಸ್ಥೆಯವರು ತಂಗುದಾಣ ನಿರ್ಮಿಸಿದ್ದಾರೆ. ಅವರ ವ್ಯವಹಾರದಲ್ಲಿ ಸ್ವಲ್ಪವನ್ನು ಸಮಾಜಕ್ಕೆ ನೀಡಿದ್ದಾರೆ. ಇಂತಹ ಉದಾರ ಮನಸ್ಸು ಇರುವವರಿಂದ ಹಳ್ಳಿ ಅಭಿವೃದ್ಧಿಯಾಗುತ್ತಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಬೆಟ್ಟಂಪಾಡಿ ಗ್ರಾಮ ಪಂಚಾಯತ್ ಸದಸ್ಯರಾದ ಮೊದುಕುಂಜ್ ಕೋನ, ಮಹಾಲಿಂಗ ನಾಯ್ಕ ದೂಮಡ್ಕ,ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸನ ಮಾರ್ಕೆಟಿಂಗ್ ಮ್ಯಾನೇಜರ್ ಕೀರ್ತನ್ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.
ಕಕ್ಕೂರು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನಿರ್ದೇಶಕಿ ಎಂ.ಗಿರಿಜಾ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಮುಂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯಪ್ರಕಾಶ್ ರೈ ಚೆಲ್ಯಡ್ಕ ವಂದಿಸಿದರು.