Wednesday, March 26, 2025
ಉದ್ಯೋಗಕಡಬಗೋಕರ್ಣದಕ್ಷಿಣ ಕನ್ನಡಬಂಟ್ವಾಳಬದಿಯಡ್ಕಬಳ್ಳಾರಿಬೆಂಗಳೂರುಬೈಂದೂರುಭಟ್ಕಳಮಡಿಕೇರಿಮಂಡ್ಯಮಾಹಿತಿಮೈಸೂರುರಾಜ್ಯರಾಮನಗರರಾಷ್ಟ್ರೀಯಸಕಲೇಶಪುರಸುದ್ದಿಹಾಸನಹುಬ್ಬಳ್ಳಿಹೆಚ್ಚಿನ ಸುದ್ದಿ

ದ. ಕ. ಜಿ. ಪಂ. ಹಿರಿಯ ಪ್ರಾಥಮಿಕ ಶಾಲೆ ಕೆಮ್ಮಾನುಪಲ್ಕೆ ಶಾಲಾ ವಾರ್ಷಿಕೋತ್ಸವ 2024-25-ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕಿನ ಧಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಕೆಮ್ಮಾನುಪಲ್ಕೆ ಇಲ್ಲಿ ಶಾಲಾ ವಾರ್ಷಿಕೋತ್ಸವ 2024-25 ಕಾರ್ಯಕ್ರಮ ಡಿಸೆಂಬರ್ 13 ಶುಕ್ರವಾರ ಸಾಯಂಕಾಲ ಗಂಟೆ 5 ರಿಂದ ನಡೆಯಲಿರುವುದು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಂಟ್ವಾಳ ಕ್ಷೇತ್ರ ಶಾಸಕರಾದ ರಾಜೇಶ್ ನಾಯ್ಕ್ ಯು ವಹಿಸಲಿದ್ದು. ವಿಶೇಷ ಆಹ್ವಾನಿತರಾಗಿ ಮಾಜಿ ಸಚಿವರಾದ ಬಿ.ರಮನಾಥ ರೈ,ಕಡೇಶಿವಾಲಯ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಭಾರತೀ ಎಸ್ ರಾವ್, ಉಪಾಧ್ಯಕ್ಷರಾದ ಸುರೇಶ್ ಕನ್ನೋಟ್ಟು,ಪಂಚಾಯತ್ ಸದಸ್ಯರುಗಳಾದ ಹರಿಶ್ಚಂದ್ರ ಕಾಡಬೆಟ್ಟು, ಜಯ ದೇವಾಡಿಗ, ದೇವಿ ಪ್ರಸಾದ್ ಶೆಟ್ಟಿ, ಶ್ರೀಮತಿ ಗೀತಾ, ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ ಎಮ್ ಜಿ, ಬಂಟ್ವಾಳ ಕ್ಷೇತ್ರ ಸಂಪನ್ಮೂಲ ಕೇಂದ್ರದ ಪ್ರಭಾರ ಸಮನ್ವಯ ಅಧಿಕಾರಿ ವಿದ್ಯಾಕುಮಾರಿ, ಕಲ್ಲಡ್ಕ ವಲಯ ಶಿಕ್ಷಣ ಸಂಯೋಜಕಿ ಪ್ರತಿಮಾ ವೈ, ಕೆದಿಲ ಕ್ಲಸ್ಟರ್ ಸಿ ಆರ್ ಪಿ ಸುಧಾಕರ್ ಭಟ್,ಕೆಮ್ಮಾನುಪಲ್ಕೆ ಶಾಲಾ ಹಿತೈಷಿ ಬಳಗದ ಅಧ್ಯಕ್ಷ ಸುಧಾಕರ್ ಮುಚ್ಚಿಲ , ಮೊದಲಾದವರು ಭಾಗವಹಿಸಲಿರುವರು.

ಕಾರ್ಯಕ್ರಮದಲ್ಲಿ ಶಾಲ ನಿವೃತ್ತ ಮುಖ್ಯಶಿಕ್ಷಕ ಶ್ರೀಯುತ ಆನಂದ ನಾಯ್ಕ ಏನ್ ರವರಿಗೆ ಸನ್ಮಾನ ಹಾಗೂ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಶಾಲಾ ಹಿರಿಯ ವಿದ್ಯಾರ್ಥಿಗಳಿಗೆ ಅಭಿನಂದನೆ ಮಾಡಲಾಗುವುದು.

ಜಾಹೀರಾತು
ಜಾಹೀರಾತು
ಜಾಹೀರಾತು

ಸಭಾ ಕಾರ್ಯಕ್ರಮದ ಬಳಿಕ ಶಾಲಾ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಲಿರುವುದು ಎಂದು ಕೆಮ್ಮಾನುಪಲ್ಕೆ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಅಬ್ದುಲ್ ರಝಕ್ ಯಾನೆ ಸಲೀಂ, ಹಾಗೂ ಶಾಲಾ ಪ್ರಭಾರ ಮುಖ್ಯ ಶಿಕ್ಷಕ ಉದಯಕುಮಾರ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ನೆಹರು ಮೆಮೋರಿಯಲ್ ಕಾಲೇಜಿನ ಪ್ರಾಂಶುಪಾಲರಾದ ಡಾ. ರುದ್ರಕುಮಾರ್ ಎಂ. ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದ ವೇದಿಕೆಯಲ್ಲಿ ಅರೆಭಾಷೆ ಅಕಾಡೆಮಿಯ ಸದಸ್ಯರಾದ ಡಾ. ಜ್ಞಾನೇಶ್ ಎನ್ ಎ, ಗೋಪಾಲ್ ಪೆರಾಜೆ, ಮಹಾತ್ಮ ಗಾಂಧಿ ಮಲ್ನಾಡ್ ವಿದ್ಯಾ ಸಂಸ್ಥೆಗಳ ಸಂಚಾಲಕರಾದ ದೊಡ್ಡಣ್ಣ ಬರೆಮೇಲು ಉಪಸ್ಥಿತರಿದ್ದರು.

ಕಾಲೇಜಿನ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಸಂಘದ ಸಂಚಾಲಕರಾದ ಸಂಜೀವ ಕುದ್ಪಾಜೆ ಸ್ವಾಗತಿಸಿ, ಕುಲದೀಪ್ ಪೆಲ್ತಡ್ಕ ವಂದಿಸಿದರು. ಕೃಪಾ ಕೆ ಎನ್ ಕಾರ್ಯಕ್ರಮ ನಿರೂಪಿಸಿದರು.

ಕಾಲೇಜಿನ ಬೋಧಕ ಬೋಧಕೇತರ ಸಿಬ್ಬಂದಿ, ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರು ಸಹಕರಿಸಿ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು.

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ