ಸಾಂಸ್ಕೃತಿಕ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು -ಕಹಳೆ ನ್ಯೂಸ್
ಮಣಿಪಾಲ : ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ದೀ ಮತ್ತು ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಡಿಸೆಂಬರ್9 ರಂದು ನಡೆದ, 2024-25ನೇ ಸಾಲಿನ ಪದವಿ ಪೂರ್ವ ವಿದ್ಯಾರ್ಥಿಗಳ ಮೈಸೂರು ವಿಭಾಗ ಮಟ್ಟದ ಸಾಂಸ್ಕೃತಿಕ ಸಹ ಪಠ್ಯೇತರ ಸ್ಪರ್ಧೆಗಳಲ್ಲಿ ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು , ವಿದ್ಯಾ ಗರದ ಪ್ರಥಮ ಪಿ.ಯು.ಸಿ ವಿದ್ಯಾರ್ಥಿಗಳು ಭಾಗವಹಿಸಿ ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ಅನುಷ್ಕಾ ಆರ್ ಖಾರ್ವಿ ದ್ವಿತೀಯ ಸ್ಥಾನ ಇಂಗ್ಲೀಷ್ ಪ್ರಬಂಧ ಸ್ಪರ್ಧೆಯಲ್ಲಿ ಅಲಿಷಾ ಕ್ಲಿಯಾಂತ ಬಿ ತೃತೀಯ ಸ್ಥಾನ, ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಸಾಧಕ ವಿದ್ಯಾರ್ಥಿಗಳನ್ನು ಅಜೆಕಾರ್ ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟ್ ನ ಅಧ್ಯಕ್ಷರಾದ ಡಾ. ಸುಧಾಕರ ಶೆಟ್ಟಿ, ಸಂಸ್ಥೆಯ ಪ್ರಾಂಶುಪಾಲರು, ಹಾಗೂ ಬೋಧಕ ಬೋಧಕೇತರ ವರ್ಗ ಅಭಿನಂದಿಸಿರುತ್ತಾರೆ.