Sunday, January 19, 2025
ದಕ್ಷಿಣ ಕನ್ನಡಮಂಗಳೂರು

ಬಿಪಿಎಲ್ ಪಡಿತರ ರದ್ದತಿಯ ಮಾನದಂಡ ಸರಿಯಿಲ್ಲ; ಡಾ.ಭರತ್ ಶೆಟ್ಟಿ ವೈ-ಕಹಳೆ ನ್ಯೂಸ್

ಬೆಳಗಾವಿ: ಬಿಪಿಎಲ್ ಪಡಿತರ ರದ್ದು ಮಾನದಂಡ ವಿಚಾರದಲ್ಲಿ ಶಾಸಕರಾದ ಡಾ.ಭರತ್ ಶೆಟ್ಟಿ ವೈ ಅವರು ಸರಕಾರವನ್ನು ಬೆಳಗಾವಿ ಅಧಿವೇಶನದಲ್ಲಿ ತರಾಟೆಗೆ ತೆಗೆದುಕೊಂಡಿದ್ದಾರೆ. ಬಿಪಿಎಲ್ ಪಡಿತರ ಫಲಾನುಭವಿಗಳು ಯಾವುದೋ ಕಾರಣಕ್ಕೆ ಒಂದೆರಡು ಮೂರು ತಿಂಗಳು ಪಡಿತರ ಪಡೆದುಕೊಳ್ಳದಿದ್ದಲ್ಲಿ ಕಾರ್ಡ್ ರದ್ದಾಗುತ್ತಿದೆ.ಕೆಲವೊಂದು ಸಾಲ ಸೌಲಭ್ಯಕ್ಕಾಗಿ ಕೇವಲ ಆದಾಯ ರಿಟರ್ನ್ ಮಾಡಿದವರ ಕಾರ್ಡ್ ರದ್ದಾಗುತ್ತಿದೆ.

ಆಯುಷ್ಮಾನ್ ಜತೆ ಬಿಪಿಎಲ್ ಪಡಿತರ ಲಿಂಕ್ ಇರುವುದರಿಂದ ಮತ್ತೆ ಕಾರ್ಡ್ ಪಡೆಯಲು ಫಲಾನುಭವಿಯ ಫೈಲ್ ಜಿಲ್ಲಾ ಮಟ್ಟದಲ್ಲಿ ವಿಲೇವಾರಿ‌ ಮಾಡುವ ಬದಲು ಬೆಂಗಳೂರಿಗೆ ಕಳಿಸಬೇಕಿದೆ. ಈ ನಡುವೆ ಚಿಕಿತ್ಸೆ ಪಡೆಯುತ್ತಿರುವವರ ಪಾಡು ಏನು,ಸರಕಾರ ಬಿಪಿಎಲ್ ಕಾರ್ಡ್ ರದ್ದು ಮಾನದಂಡವನ್ನು ಪುನರ್ ಪರಿಶೀಲಿಸಬೇಕು. ರದ್ದಾದ ಬಿಪಿಎಲ್ ಪಡಿತರವನ್ನು ಮತ್ತೆ ನೈಜ ಫಲಾನುಭವಿಗೆ ದೊರಕಿಸಲು ಆಯಾ ಜಿಲ್ಲಾ ಮಟ್ಟದಲ್ಲಿ ಶೀಘ್ರ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಬೇಕು.ಬಡವರನ್ನು ಸರಕಾರ ವಿನಾಕಾರಣ ಸಮಸ್ಯೆಗೆ ಸಿಲುಕಿಸುವುದು ಸರಿಯಲ್ಲ ಎಂದು ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಇದಕ್ಕೆ ಉತ್ತರಿಸಿದ ಆಹಾರ ಪೂರೈಕೆ ಸಚಿವ ಮುನಿಯಪ್ಪ.ಆರೋಗ್ಯ ಸಂಬಂಧಿ ಚಿಕಿತ್ಸೆಗೆ ಸ್ಥಳೀಯ ಉಪ ನಿರ್ದೇಶಕರಿಗೆ ಅರ್ಜಿ ಸಲ್ಲಿಸಿದರೆ ತಕ್ಷಣ ಬೇಕಾದ ಕ್ರಮ ಕೈಗೊಳ್ಳಲಾಗುದು. ಸರಕಾರಿ ನೌಕರರ ಹಾಗೂ 1,20,000 ಮೇಲ್ಪಟ್ಟವರ ಕಾರ್ಡ್ ರದ್ದಾಗುತ್ತಿದೆ ಎಂದು ಸಚಿವರು ಉತ್ತರಿಸಿದರು. ಸಭಾಪತಿ ಶಾಸಕ ಡಾ.ಭರತ್ ಶೆಟ್ಟಿ ವೈ ಅವರ ಪ್ರಶ್ನೆಗೆ ಧ್ವನಿ ಗೂಡಿಸಿ ಬಡವರು ಮನೆ ಕಟ್ಟಲು ಅನಿವಾರ್ಯವಾಗಿ ಆದಾಯ ರಿಟರ್ನ್ ಕಟ್ಟುತ್ತಾರೆ ಅಂತಹವರ ಕಾರ್ಡ್ ರದ್ದು ಸರಿಯಲ್ಲ ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು