Sunday, January 19, 2025
ಬೆಂಗಳೂರು

ಮೊದಲ ಬಾರಿಗೆ ಕನ್ನಡದಲ್ಲಿ ತೀರ್ಪು ಪ್ರಕಟಿಸಿದ ಹೈಕೋರ್ಟ್

ಬೆಂಗಳೂರು:ರ್ನಾಟಕ ಉಚ್ಚ ನ್ಯಾಯಾಲಯದ ಇತಿಹಾಸದಲ್ಲಿ, ಇದೇ ಮೊದಲ ಬಾರಿಗೆ ಕನ್ನಡದಲ್ಲಿ ತೀರ್ಪು ಪ್ರಕಟಿಸುವ ಮೂಲಕ ನ್ಯಾಯಮೂರ್ತಿಗಳಾದ ಕೃಷ್ಣ ಎಸ್. ದೀಕ್ಷಿತ್ ಮತ್ತು ಸಿ.ಎಂ.ಜೋಶಿ ಅವರ ವಿಭಾಗೀಯ ಪೀಠ ಗುರುವಾರ(ಡಿ.12) ಹೊಸ ಇತಿಹಾಸ ದಾಖಲಿಸಿದೆ.ಭಾರತ ಭಾಷಾ ದಿನ(ಡಿ.11)ದ ಹಿನ್ನೆಲೆಯಲ್ಲಿ ಹೈಕೋರ್ಟ್ ಕನ್ನಡದಲ್ಲಿ ತೀರ್ಪು ಪ್ರಕಟಿಸಿತು.

ಇಂಗ್ಲೆಂಡ್ನಲ್ಲಿ 1730 ರವರೆಗೆ ಲ್ಯಾಟಿನ್ ಭಾಷೆಯಲ್ಲಿ ಕೋರ್ಟ್ ಕಲಾಪ ನಡೆಸಲಾಗುತ್ತಿತ್ತು. 1730 ರಿಂದ ಅವರ ಸ್ವಭಾಷೆ ಇಂಗ್ಲಿಷ್ ನಲ್ಲಿಯೇ ಕಲಾಪವನ್ನು ಆರಂಭಿಸಲಾಗಿತ್ತು. ಜನಸಾಮಾನ್ಯರಿಗೆ ಕೋರ್ಟ್ ತೀರ್ಪು ಏನಿದೆ ಎಂದು ತಿಳಿಯಬೇಕೆಂದು ಈ ಉಪಕ್ರಮ ಕೈಗೊಳ್ಳಲಾಗಿದೆ. ಕನ್ನಡದ ಅವಸಾನ ಆಗಬಾರದು ಎನ್ನುವುದಾದರೆ ಕನ್ನಡಕ್ಕೆ ಮಾನ್ಯತೆ ಸಿಗಬೇಕು. ಸಾಂವಿಧಾನಿಕ ಸಂಸ್ಥೆಗಳಲ್ಲೂ ಕನ್ನಡದಲ್ಲಿ ವ್ಯವಹಾರ ನಡೆಯಬೇಕು ಎಂದು ನ್ಯಾ. ಕೃಷ್ಣ ಎಸ್. ದೀಕ್ಷಿತ್ ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು