ಬಂಟ್ವಾಳ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ದಕ್ಷಿಣ ಜಿಲ್ಲೆ, ಅರೋಗ್ಯ ಮತ್ತು ಕ್ಷೇಮ ಕೇಂದ್ರ ಉಪಕೇಂದ್ರ ವೀರಕಂಭ, ಗ್ರಾಮ ಅರೋಗ್ಯ ನೈರ್ಮಲ್ಯ ಮತ್ತು ಪೌಷ್ಟಿಕ ಸಮಿತಿಯ ಸಭೆ ವೀರಕಂಭ ಪಂಚಾಯತ್ ಸಭಾ ಭವನದಲ್ಲಿ ಜರಗಿತು.
ಗ್ರಾಮ ಸಮುದಾಯ ಆರೋಗ್ಯ ಅಧಿಕಾರಿ ಹರ್ಷಿತ ಕ್ಷಯ ರೋಗ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಸಮಿತಿಯ ಮುಂದಿನ ಕಾರ್ಯಕ್ರಮಗಳ ಬಗ್ಗೆ ಚರ್ಚಿಸಿ ನಿರ್ಣಯಿಸಲಾಯಿತು.
ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಲಲಿತಾ, ಉಪಾಧ್ಯಕ್ಷರಾದ ಜನಾರ್ದನ ಪೂಜಾರಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುಷ್ಪ, ಪಂಚಾಯತ್ ಕಾರ್ಯದರ್ಶಿ ಸವಿತಾ, ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವೀರಕಂಬ ಗ್ರಾಮ ಪಂಚಾಯತ್ ಸದಸ್ಯರುಗಳಾದ ರಘು ಪೂಜಾರಿ, ಶೀಲಾ ನಿರ್ಮಲ ವೆಗಸ್,ಜಯಂತಿ, ಗೀತ ಗಾಂಭೀರ್, ದಿನೇಶ್ ಪೂಜಾರಿ, ಜಯಪ್ರಸಾದ್, ಅಬ್ದುಲ್ ರಹೀಮಾನ್, ವೀರಕಂಬ ಗ್ರಾಮ ವ್ಯಾಪ್ತಿಯ ಆರೋಗ್ಯ ಸುರಕ್ಷಣಾಧಿಕಾರಿ ಜ್ಯೋತಿ ಕೆ ಏನ್,ಆಶಾ ಸುಗಮಕಾರರಾದ ಶೋಭಾ,ಆಶಾ ಕಾರ್ಯಕರ್ತೆಯರಾದ ಸ್ನೇಹಲತ ಶೆಟ್ಟಿ, ಶಶಿಕಲಾ, ಮೊದಲಾದವರು ಭಾಗವಹಿಸಿದ್ದರು.