Sunday, January 19, 2025
ರಾಜಕೀಯಸುದ್ದಿ

ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್ ಪಕ್ಷ ಇತಿಹಾಸದ ಪುಟ ಸೇರಲಿದೆ: ಡಿ.ವಿ.ಎಸ್ – ಕಹಳೆ ನ್ಯೂಸ್

ಮಂಗಳೂರು : ಸಾಕಷ್ಟು ವಿರೋಧದ ನಡುವೆ ಕಾಂಗ್ರೆಸ್ ಪಕ್ಷ ಟಿಪ್ಪು ಜಯಂತಿ ಆಚರಣೆ ಮಾಡಿರುವುದಕ್ಕೆ ಮುಂದಿನ ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್ ಪಕ್ಷ ಇತಿಹಾಸದ ಪುಟ ಸೇರಲಿದೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಹೇಳಿದ್ದಾರೆ. 

ಮಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಟಿಪ್ಪು ಜಯಂತಿ ಆಚರಣೆ ಮಾಡುವುದರ ಬದಲು ಟಿಪ್ಪುವನ್ನು ಮರೆಯುವ ಕೆಲಸ ಆಗಬೇಕಿತ್ತು. ಸಾಕಷ್ಟು ವಿರೋಧದ ನಡುವೆ ಕಾಂಗ್ರೆಸ್ ಪಕ್ಷ ಈ ಕಾರ್ಯಕ್ರಮ ನಡೆಸಲು ಮುಂದಾಗಿದೆ. ಮುಂದಿನ ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್ ಪಕ್ಷ ಇತಿಹಾಸದ ಪುಟ ಸೇರಲಿದೆ ಎಂದು ಹೇಳಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮಹಾಘಟಬಂಧನ್ ಬಗ್ಗೆ ಮಾತನಾಡಿದ ಅವರು, ‘ಮಹಾಘಟಬಂಧನ್ ಯಶಸ್ವಿಯಾಗಲು ಸಾಧ್ಯವಿಲ್ಲ. ಇದಕ್ಕೆ ಸಮರ್ಥ ನಾಯಕತ್ವದ ಕೊರತೆ ಇದೆ. ರಾಹುಲ್ ಗಾಂಧಿ ಒಬ್ಬ ಜೋಕರ್ ಇದ್ದಹಾಗೆ, ಅವರ ನಾಯಕತ್ವಕ್ಕೆ ಕಾಂಗ್ರೆಸ್ ಪಕ್ಷದಲ್ಲಿಯೇ ವಿರೋಧ ಇದೆ. ಇನ್ನು ಮಹಾಘಟಬಂಧನ್ ನಲ್ಲಿರುವ ಪ್ರಾದೇಶಿಕ ಪಕ್ಷಗಳು ಏಡಿ ಇದ್ದಹಾಗೆ. ಒಬ್ಬರು ಇನ್ನೊಬ್ಬರನ್ನು ಮೇಲಕ್ಕೆ ಹೋಗಲು ಬಿಡುವುದಿಲ್ಲ ಎಂದು ಅವರು ವ್ಯಂಗ್ಯವಾಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು