ಭಾರತೀಯ ರಿಸರ್ವ್ ಬ್ಯಾಂಕ್(RBI)ನ ಪ್ರಧಾನ ಕಚೇರಿಗೆ ರಷ್ಯನ್ ಭಾಷೆಯಲ್ಲಿ ದುಷ್ಕರ್ಮಿಗಳಿಂದ ಬಾಂಬ್ ಸ್ಫೋಟಿಸುವುದಾಗಿ ಇ-ಮೇಲ್ ಮೂಲಕ ಬೆದರಿಕೆ – ಕಹಳೆ ನ್ಯೂಸ್
ಮುಂಬೈ : ಮುಂಬೈನಲ್ಲಿರುವ ಭಾರತೀಯ ರಿಸರ್ವ್ ಬ್ಯಾಂಕ್(RBI)ನ ಪ್ರಧಾನ ಕಚೇರಿಯನ್ನು ಸ್ಫೋಟಿಸುವುದಾಗಿ ದುಷ್ಕರ್ಮಿಗಳಿಂದ ಡಿ. 13ರಂದು ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ.
RBI ಇಮೇಲ್‌ಗೆ ದುಷ್ಕರ್ಮಿಗಳು ರಷ್ಯನ್ ಭಾಷೆಯಲ್ಲಿ ಬೆದರಿಕೆ ಸಂದೇಶ ಕಳುಹಿಸಿದ್ದು, ಆರ್‌ಬಿಐ ಕಟ್ಟಡದ ಮೇಲೆ ದಾಳಿಯ ಎಚ್ಚರಿಕೆ ನೀಡಲಾಗಿದೆ. ಕಳೆದ ಒಂದು ತಿಂಗಳಲ್ಲಿ ಇದು 2ನೇ ಬೆದರಿಕೆಯಾಗಿದೆ.
ಸದ್ಯ ಮುಂಬೈನ ಮಾತಾ ರಮಾಬಾಯಿ ಮಾರ್ಗ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ (BNS) ಸಂಬAಧಿತ ಸೆಕ್ಷನ್‌ಗಳ ಅಡಿಯಲ್ಲಿ ಇ-ಮೇಲ್ ಕಳುಹಿಸಿದವರ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಆರ್‌ಬಿಐನ ಅಧಿಕೃತ ವೆಬ್‌ಸೈಟ್‌ನಲ್ಲಿ ಬೆದರಿಕೆ ಇಮೇಲ್ ಬಂದಿದೆ. ಇಮೇಲ್ ರಷ್ಯನ್ ಭಾಷೆಯಲ್ಲಿದೆ ಮತ್ತು ಬ್ಯಾಂಕ್‌ನ್ನು ಸ್ಫೋಟಿಸುವ ಎಚ್ಚರಿಕೆ ನೀಡಲಾಗಿದೆ. ಮೇಲ್ ಕಳುಹಿಸಲು ವಿಪಿಎನ್ ಅನ್ನು ಬಳಸಲಾಗಿದೆಯೇ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಜೊತೆಗೆ ಇಮೇಲ್ ಕಳುಹಿಸಿದವರ ಐಪಿ ವಿಳಾಸವನ್ನು ಸಹ ಪತ್ತೆಹಚ್ಚುತ್ತಿದ್ದಾರೆ ಎಂದು ಬೆದರಿಕೆ ಇಮೇಲ್ ಕುರಿತು ಮುಂಬೈ ಪೊಲೀಸ್ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.