ರೆಖ್ಯ :- ಡಿ. 21 ರಂದು ರೆಖ್ಯದ ಕಟ್ಟೆ ಸ.ಕಿ.ಪ್ರಾ ಶಾಲೆಯಲ್ಲಿ ಚಿಣ್ಣರ ಚಿಲಿಪಿಲಿ ಕಾರ್ಯಕ್ರಮ – ಕಹಳೆ ನ್ಯೂಸ್
ಶಾಲಾ ವಿದ್ಯಾರ್ಥಿಗಳು, ಗ್ರಾಮಸ್ಥರಿಂದ ಸಾಂಸ್ಕೃತಿಕ ವೈಭವ
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕರ್ನಾಟಕ ಸರಕಾರ
ಕ್ಷೇತ್ರ ಶಿಕ್ಷಣಾಧಿಕಾರಿ ಕಛೇರಿ ಬೆಳ್ತಂಗಡಿ, ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕಟ್ಟೆ ರೆಖ್ಯ, ಅಂಗನವಾಡಿ ಕೇಂದ್ರ ಕಟ್ಟೆ ರೆಖ್ಯ, ಹಳೇ ವಿದ್ಯಾರ್ಥಿ ಸಂಘ ಸ.ಕಿ.ಪ್ರಾ ಶಾಲೆ ಕಟ್ಟೆ
ಇವುಗಳ ಜಂಟಿ ಆಶ್ರಯದಲ್ಲಿ ಚಿಣ್ಣರ ಚಿಲಿಪಿಲಿ ಕಾರ್ಯಕ್ರಮ ನಡೆಯಲಿದೆ
ಬೆಳಿಗ್ಗೆ 9.00 ಕ್ಕೆ ಧ್ವಜಾರೋಹಣ, ಬೆಳಿಗ್ಗೆ 10.30 ಕ್ಕೆ ಛದ್ಮವೇಶ ಸ್ಪರ್ಧೆ, ಅಪರಾಹ್ನ 3.30 ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದೆ
ಶಾಲಾ ಸಹ ಶಿಕ್ಷಕರಾಗಿ ಸೇವೆ ಸಲ್ಲಿಸಿದ ಅಶೋಕ್ ಡಿ ಅವರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ
ರಾತ್ರಿ 8.30 ರಿಂದ ಶಾಲಾ ವಿದ್ಯಾರ್ಥಿಗಳು, ಹಳೇ ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿದೆ