Sunday, January 19, 2025
ಸುದ್ದಿ

ಅಸ್ಸಾಂ ಜರ‍್ಹತ್​ನ ವೈದ್ಯಕ್ಯೀಯ ಕಾಲೇಜಿನಲ್ಲಿ 9 ದಿನದಲ್ಲಿ 18 ನವಜಾತ ಶಿಶುಗಳು ಸಾವು – ಕಹಳೆ ನ್ಯೂಸ್

ಜರ‍್ಹಟ್: ಅಸ್ಸಾಂನ ಜರ‍್ಹತ್​ನ ವೈದ್ಯಕ್ಯೀಯ ಕಾಲೇಜಿನಲ್ಲಿ  ಕಳೆದ 9 ದಿನಗಳಿಂದ 18 ನವಜಾತ ಶಿಶುಗಳು ಮೃತಪಟ್ಟಿರುವುದಾಗಿ ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಯುನಿಸೆಫ್ ಪ್ರತಿನಿಧಿಯೊಬ್ಬರು ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ ಎನ್ನಲಾಗಿದೆ.

ನವಜಾತ ಶಿಶುಗಳು ಮೃತಪಡಲು ಆಸ್ಪತ್ರೆಯವರ ನಿರ್ಲಕ್ಷ್ಯವೇ ಕಾರಣ ಎನ್ನುವ ಆರೋಪಗಳು ಕೇಳಿ ಬಂದಿದ್ದವು. ಇದಕ್ಕೆ ಸ್ಪಷ್ಟನೆ ನೀಡಿರುವ ಸೌರವ್​, ‘ನವಜಾತ ಶಿಶುಗಳ ಬಗ್ಗೆ ಯಾರೊಬ್ಬರೂ ನಿರ್ಲಕ್ಷ್ಯ ತೋರಿಲ್ಲ. ಈ ಸಂಬಂಧ ತನಿಖೆ ನಡೆಯುತ್ತಿದೆ. ನಮ್ಮ ಸಿಬ್ಬಂದಿಯಿಂದಲೇ ತಪ್ಪು ನಡೆದಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಮುಂದಿನ ದಿನಗಳಲ್ಲಿ ಇಂಥ ಘಟನೆ ಮರುಕಳಿಸದಂತೆ ನೋಡಿಕೊಳ್ಳುತ್ತೇವೆ’ ಎಂದಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಆಸ್ಪತ್ರೆಯಲ್ಲಿ ಮಕ್ಕಳು ಮೃತಪಟ್ಟಿರುವುದು ನಿಜ ಎಂದು ಆಸ್ಪತ್ರೆಯ ಅಧಿಕಾರಿಯೊಬ್ಬರು ಸ್ಪಷ್ಟಪಡಿಸಿದ್ದಾರೆ. “ಪ್ರಕರಣಕ್ಕೆ ಸಂಬಂಧಿಸಿ ಆಂತರಿಕ ಸಮಿತಿಯೊಂದನ್ನು ರಚಿಸಲಾಗಿದೆ. ನವೆಂಬರ್ 1 ರಿಂದ 18 ಮಕ್ಕಳು ಮೃತಪಟ್ಟಿದ್ದಾರೆ ಎಂದವರು ಮಾಹಿತಿ ನೀಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು