Sunday, January 19, 2025
ಬೆಳಗಾವಿರಾಜಕೀಯರಾಜ್ಯಸುದ್ದಿ

ಬೋರ್‌ವೆಲ್‌ ಮುಚ್ಚದಿದ್ದರೆ 1 ವರ್ಷ ಜೈಲು ಶಿಕ್ಷೆ, ದಂಡ ; ಬೆಳಗಾವಿ ಅಧಿವೇಶನದಲ್ಲಿ ಬಿಲ್ ಪಾಸ್ – ಕಹಳೆ ನ್ಯೂಸ್

ಬೆಳಗಾವಿ, ಡಿ.17 : ಕಾರ್ಯನಿರ್ವಹಿಸದ ಅಥವಾ ಸ್ಥಗಿತಗೊಂಡ ಕೊಳವೆಬಾವಿ ಮುಚ್ಚದ ಜಮೀನು ಮಾಲೀಕರಿಗೆ 1 ವರ್ಷ ಜೈಲು ಶಿಕ್ಷೆ, 10 ಸಾವಿರ ರೂ. ದಂಡ ವಿಧಿಸುವ ತಿದ್ದುಪಡಿ ವಿಧೇಯಕ ಸೇರಿದಂತೆ ಬೆಳಗಾವಿ ಸುರ್ವಣಸೌಧದಲ್ಲಿ ಚಳಿಗಾಲದ ವಿಧಾನಮಂಡಲ ಅಧಿವೇಶನದಲ್ಲಿ 8 ವಿಧೇಯಕಗಳನ್ನು ಅಂಗೀಕರಿಸಲಾಯಿತು.

ವಿಫಲ ಕೊಳವೆಬಾವಿಯನ್ನು ಸೂಕ್ತ ರೀತಿಯಲ್ಲಿ ಮುಚ್ಚದೆ ದುರಂತಕ್ಕೆ ಕಾರಣರಾಗುವವರನ್ನು ಶಿಕ್ಷಿಸಲು ಸಚಿವ ಎನ್.ಎಸ್.ಬೋಸರಾಜು ಅವರು ಮಂಡಿಸಿದ, ಕರ್ನಾಟಕ ಅಂತರ್ಜಲ (ನಿಯಮಾವಳಿ ಮತ್ತು ಅಭಿವೃದ್ಧಿ, ನಿವರ್ಹಣಾ ನಿಯಂತ್ರಣ) ತಿದ್ದುಪಡಿ ವಿಧೇಯಕ-2024 ವಿಧೇಯಕವನ್ನು ಅಧಿವೇಶನದಲ್ಲಿ ಅಂಗೀಕರಿಸಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಹೊಸ ತಿದ್ದುಪಡಿಯಂತೆ ನಿರುಪಯುಕ್ತ ಅಥವಾ ಸ್ಥಗಿತಗೊಂಡ ಕೊಳವೆಬಾವಿ ಮುಚ್ಚದ ಜಮೀನು ಮಾಲೀಕರಿಗೆ 1 ವರ್ಷ ಜೈಲು ಶಿಕ್ಷೆ, 10 ಸಾವಿರ ರೂ. ದಂಡ ವಿಧಿಸಲಾಗುತ್ತದೆ. ಅದನ್ನು ಕೊರೆದ ಸಂಸ್ಥೆಯ ಮಾಲೀಕರಿಗೆ 1 ವರ್ಷ ಜೈಲು ಶಿಕ್ಷೆ ಮತ್ತು 20 ಸಾವಿರ ರೂ. ದಂಡ ವಿಧಿಸುವ ಅಂಶ ವಿಧೇಯಕದಲ್ಲಿ ಸೇರಿಸಲಾಗಿದೆ. ಸಣ್ಣ ಮಕ್ಕಳು ಕೊಳವೆ ಬಾವಿಗೆ ಬಿದ್ದು ಸಾವನ್ನಪ್ಪುವ, ನಾವು-ಬದುಕಿನ ನಡುವೆ ಹೋರಾಟ ನಡೆಸುವ ಪ್ರಕರಣವನ್ನು ತಪ್ಪಿಸುವ ಉದ್ದೇಶದಿಂದ ಈ ವಿಧೇಯಕವನ್ನು ಅಂಗೀಕರಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇನ್ನು ಕಾಯ್ದೆ ಬಗ್ಗೆ ವಿವರಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್, ಸ್ವಯಂ ಘೋಷಿತ ಆಸ್ತಿ ತೆರಿಗೆ ಪದ್ಧತಿ ಅಡಿಯಲ್ಲಿ ತಪ್ಪು ಮಾಹಿತಿ ನೀಡಿ ಒಟಿಎಸ್ ಅಡಿ ಬಾಕಿ ತೆರಿಗೆ ಪಾವತಿಸಿದವರ ಮಾಹಿತಿಯನ್ನು ತಿದ್ದುಪಡಿ ಮಾಡುವುದು ಸೇರಿ ಮತ್ತಿತರ ಅವಕಾಶ ನೀಡಲು ಕಾಯ್ದೆಗೆ ತಿದ್ದುಪಡಿ ತರಲಾಗಿದೆ ಎಂದು ತಿಳಿಸಿದರು.