ಮಸೀದಿಯೊಳಗೆ ‘ಜೈ ಶ್ರೀರಾಮ್’ ಘೋಷಣೆ ಕೂಗುವುದು ತಪ್ಪಾ? – ಕರ್ನಾಟಕ ಪೊಲೀಸರ ನಡೆ ಪ್ರಶ್ನಿಸಿದ ಸುಪ್ರೀಂ – ಕಹಳೆ ನ್ಯೂಸ್
ದಕ್ಷಿಣ ಕನ್ನಡದ ಐತ್ತೂರಿನ ಜುಮ್ಮ ಮಸೀದಿ ಆವರಣದಲ್ಲಿ ‘ಜೈ ಶ್ರೀರಾಮ್’ ಘೋಷಣೆ ಕೂಗಿದ ಪ್ರಕರಣ ಹೈಕೋರ್ಟ್ ರದ್ದು, ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ಹೈದರ್ ಆಲಿಗೆ ಮತ್ತೆ ಮುಖಭಂಗ..!!
ದಕ್ಷಿಣ ಕನ್ನಡದ ಮಸೀದಿ (Mosque) ಆವರಣಕ್ಕೆ ನುಗ್ಗಿ ‘ಜೈ ಶ್ರೀರಾಮ್’ ಘೋಷಣೆ ಕೂಗಿದ ಆರೋಪಿಗಳ ಗುರುತು ಪತ್ತೆ ಹಚ್ಚಿದ್ಹೇಗೆ? ಅವರು ನಿರ್ದಿಷ್ಟ ಧಾರ್ಮಿಕ ನುಡಿಗಟ್ಟು ಅಥವಾ ಹೆಸರನ್ನು ಕೂಗುತ್ತಿದ್ದರು. ಅದು ಹೇಗೆ ಅಪರಾಧ ಎಂದು ಸುಪ್ರೀಂ ಕೋರ್ಟ್ ಕೇಳಿದೆ.
ಆರೋಪಿಗಳ ಗುರುತು ಖಾತ್ರಿಪಡಿಸಿಕೊಳ್ಳುವ ಮುನ್ನ ಸಿಸಿಟಿವಿ ಇಲ್ಲವೇ ಇನ್ನಾವುದೇ ಪುರಾವೆಗಳನ್ನು ಪರಿಶೀಲಿಸಲಾಗಿದೆಯಾ? ಈ ಬಗ್ಗೆ ವರದಿ ನೀಡಿ ಎಂದು ರಾಜ್ಯ ಸರ್ಕಾರವನ್ನು ಜಸ್ಟೀಸ್ ಪಂಕಜ್ ಮಿತ್ತಲ್, ಸಂದೀಪ್ ಮೆಹ್ತಾ ಅವರಿದ್ದ ಪೀಠ ಕೇಳಿದೆ.
ದಕ್ಷಿಣ ಕನ್ನಡದ ಐತ್ತೂರಿನ ಜುಮ್ಮ ಮಸೀದಿಗೆ ನುಗ್ಗಿದ್ದ ಕೀರ್ತನ್ ಮತ್ತು ಸಚಿನ್, ಜೈ ಶ್ರೀರಾಮ್ ಎಂದು ಕೂಗಿ ಬ್ಯಾರಿಗಳನ್ನು ಶಾಂತಿಯಿಂದ ಬದುಕಲು ಬಿಡಲ್ಲ ಎಂದು ಬೆದರಿಕೆ ಹಾಕಿದ್ದಾರೆ ಅಂತಾ ಆರೋಪಿಸಲಾಗಿತ್ತು. ಈ ಸಂಬಂಧ ಎಫ್‌ಐಆರ್ ದಾಖಲಿಸಿದ್ದ ಪೊಲೀಸರು, ಇಬ್ಬರನ್ನು ಬಂಧಿಸಿದ್ದರು. ಆದರೆ, ಪ್ರಕರಣ ರದ್ದು ಕೋರಿ ಇಬ್ಬರು ಹೈಕೋರ್ಟ್ ಮೆಟ್ಟಿಲೇರಿದ್ದರು. ಇದನ್ನು ಮಾನ್ಯ ಮಾಡಿದ ನಾಗಪ್ರಸನ್ನ ಅವರಿದ್ದ ಪೀಠ, ಕೇಸ್ ರದ್ದು ಮಾಡಿದ್ದರು. ಇದನ್ನು ಪ್ರಶ್ನಿಸಿ ಹೈದರ್ ಆಲಿ ಎನ್ನುವವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಜನವರಿಯಲ್ಲಿ ಮುಂದಿನ ವಿಚಾರಣೆ ನಡೆಯಲಿದೆ.