Wednesday, December 18, 2024
ಸಂತಾಪಸುದ್ದಿ

ಇಹಲೋಕ ತ್ಯಜಿಸಿದ ವೃಕ್ಷಮಾತೆ, ಪದ್ಮಶ್ರೀ ಪುರಸ್ಕೃತೆ ತುಳಸಿ ಗೌಡ – ಕಹಳೆ ನ್ಯೂಸ್

ಅಂಕೋಲಾ: ಪರಿಸರ ಪ್ರೇಮಿ, ವೃಕ್ಷಮಾತೆ, ಪದ್ಮಶ್ರೀ ಪುರಸ್ಕೃತೆ ತುಳಸಿ ಗೌಡ (86) ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದು, ಇಂದು (ಡಿ.16) ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಹೊನ್ನಳ್ಳಿ ಗ್ರಾಮದ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.

ತುಳಸಿಗೌಡ ವರ್ಷಕ್ಕೆ 30 ಸಾವಿರಕ್ಕೂ ಹೆಚ್ಚು ಗಿಡಗಳನ್ನು ನೆಟ್ಟು ಬೆಳೆಸಿ ಪರಿಸರ ಪ್ರೇಮಿ ಎಂದು ಹೆಸರಾಗಿದ್ದರು. ಕಳೆದ 14 ವರ್ಷಕ್ಕೂ ಹೆಚ್ಚು ಕಾಲ ಗಿಡ ನೆಟ್ಟು ಬೆಳೆಸುವ ಕಾಯಕದಲ್ಲಿ ತೊಡಗಿದ್ದರು. ಮನೆಯಲ್ಲಿ ತೀರಾ ಬಡತನವಿದ್ದರೂ ಅವರು ಹಸಿರು ಕ್ರಾಂತಿ ಮಾಡಿ ಇಡೀ ದೇಶದ ಗಮನ ಸೆಳೆದಿದ್ದರು. ತುಳಸಿಯವರ ಪರಿಸರ ಪ್ರೇಮವನ್ನ ಮೆಚ್ಚಿ ಕೇಂದ್ರ ಸರ್ಕಾರ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿದೆ .2020ರಲ್ಲಿ ಅಂದಿನ ರಾಷ್ಟ್ರಪತಿ ರಮಾನಾಥ ಕೋವಿಂದರಿAದ ಪದ್ಮಶ್ರೀ ಪ್ರಶಸ್ತಿ ಸ್ವಿಕರಿಸಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ತುಳಸಿಯವರು ಸುಬ್ರಾಯ ಮತ್ತು ಸೋನಿ ಎಂಬ ಇಬ್ಬರು ಮಕ್ಕಳನ್ನು ಅ*ಗಲಿದ್ದಾರೆ. ಇದೀಗ ಅವರ ನಿಧನಕ್ಕೆ ಮಾಜಿ ಸಂಸದ ಡಿಕೆ ಸುರೇಶ್ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು