ಡಿ .21 ಮತ್ತು 23 ರಂದು ಪಿಲೋಮಿನಾ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ- ಕಹಳೆ ನ್ಯೂಸ್
ಪುತ್ತೂರು: ಸಂತ ಪಿಲೋಮಿನಾ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಮತ್ತು ವಾರ್ಷಿಕೋತ್ಸವವು ಡಿಸೆಂಬರ್ 21 ಹಾಗೂ 23 ರಂದು ಕಾಲೇಜಿನ ಪ್ರಾಂಗಣದಲ್ಲಿ ನಡೆಯಲಿದೆ. ಡಿ 21 ರಂದು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಹೋಲಿ ಸ್ಪಿರಿಟ್ ಚರ್ಚ್, ಮುಕ್ಕ ಇಲ್ಲಿನ ಧರ್ಮ ಗುರುಗಳಾದ ವಂ. ಸ್ಟಾನಿ ಪಿಂಟೋ ವಹಿಸಲಿದ್ದಾರೆ.
ಡಿ 23 ರಂದು ಕಾಲೇಜಿನ ವಾರ್ಷಿಕೋತ್ಸವವು ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಲೆಕ್ಸಾ ಲೈಟಿಂಗ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಇದರ ಸಂಸ್ಥಾಪಕ ಮತ್ತು ಕಾರ್ಯನಿರ್ವಾಹಕ ನಿರ್ದೇಶಕರಾದ ರೊನಾಲ್ಡ್. ಎಸ್. ಡಿ ಸೋಜಾ ವಹಿಸಲಿದ್ದಾರೆ. ಕಾಲೇಜಿನ ಸಂಚಾಲಕರಾದ ವಂ. ಫಾ. ಲಾರೆನ್ಸ್ ಮಸ್ಕರೇನಸ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಗೌರವ ಅತಿಥಿಗಳಾಗಿ ಪದವಿ ಕಾಲೇಜಿನ ಪ್ರಾಂಶುಪಾಲರಾದ ರೆ.ಡಾ. ಆಂಟೋನಿ ಪ್ರಕಾಶ್ ಮೊಂತೇರೋ ಹಾಗೂ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷರಾದ ಜೆರಾಲ್ಡ್. ಡಿ ಕೋಸ್ಟಾ ವಹಿಸಲಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ, ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷರಾದ ಡಾ. ಶ್ರೀ ಪ್ರಕಾಶ್ ಬಿ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಪ್ರತಿಮಾ ಹೆಗ್ಡೆ, ವಿದ್ಯಾರ್ಥಿ ಸಂಘದ ನಿರ್ದೇಶಕರಾದ ಪ್ರಶಾಂತ್ ಭಟ್. ಪಿ ಹಾಗೂ ಪಿಲೋಮಿನಾ ಮೊಂತೇರೋ, ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಅಂಕಿತ ಎಲ್. ಡಿ, ಕಾರ್ಯದರ್ಶಿ ಧ್ರುವ.ಜೆ. ಭಂಡಾರಿ ಹಾಗೂ ಜೊತೆ ಕಾರ್ಯದರ್ಶಿ ಸೃಧನ್. ಕೆ. ಆಳ್ವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.