ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದ ಬಳಕೆ ಆರೋಪ ಎಂಎಲ್‌ಸಿ ಸಿ.ಟಿ.ರವಿ ಬಂಧನ – ಕಹಳೆ ನ್ಯೂಸ್
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬಗ್ಗೆ ಅವಹೇಳನಕಾರಿ ಪದ ಬಳಕೆ ಆರೋಪಕ್ಕೆ ಸಂಬಂಧಿಸಿದಂತೆ ಎಂಎಲ್‌ಸಿ ಸಿ.ಟಿ.ರವಿ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಎಫ್‌ಐಆರ್ ದಾಖಲಾದ ಬೆನ್ನಲ್ಲೇ ಸಿ.ಟಿ.ರವಿ ಅವರನ್ನು ಬಂಧಿಸಿದ ಹಿರೇಬಾಗೇವಾಡಿ ಪೊಲೀಸರು ಅಜ್ಞಾತ ಸ್ಥಳಕ್ಕೆ ಕರೆದೊಯ್ದಿದ್ದಾರೆ. ಬಂಧನ ಖಂಡಿಸಿ ಪೊಲೀಸ್ ವ್ಯಾನ್ ಹತ್ತಿ ಬಿಜೆಪಿ ಶಾಸಕರು ಅಸಮಾಧಾನ ಹೊರಹಾಕಿದ ಘಟನೆ ನಡೆಯಿತು.