Recent Posts

Monday, January 20, 2025
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಪದವಿಪೂರ್ವ ಕಾಲೇಜಿನ ಉಪನ್ಯಾಸಕಿ ಸ್ನೇಹಾ ಬಿ. ಎಸ್. ಅವರಿಗೆ ಡಾಕ್ಟರೇಟ್ ಪದವಿ-ಕಹಳೆ ನ್ಯೂಸ್

ಪುತ್ತೂರಿನ ವಿವೇಕಾನಂದ ಪದವಿಪೂರ್ವ ಕಾಲೇಜಿನ ರಸಾಯನಶಾಸ್ತ್ರ ವಿಭಾಗದ ಉಪನ್ಯಾಸಕಿ ಸ್ನೇಹಾ ಬಿ. ಎಸ್ ಇವರು ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ಸಲ್ಲಿಸಿದ  “Study of Adsorption behaviour on plant based activated carbon” ಎಂಬ ಮಹಾಪ್ರಬಂಧಕ್ಕೆ ವಿಶ್ವವಿದ್ಯಾನಿಲಯವು ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.

ಇವರು ಮಂಗಳೂರು ವಿಶ್ವವಿದ್ಯಾನಿಲಯದ ವಿಶ್ರಾಂತ ಪ್ರೊಫೆಸರ್ ಹಾಗೂ ಪ್ರಸ್ತುತ ಬಿಹಾರದ ನಳಂದಾ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಡಾ. ಬಿ. ನಾರಾಯಣ ಇವರ ಮಾರ್ಗದರ್ಶನದಲ್ಲಿ ಈ ಮಹಾಪ್ರಬಂಧವನ್ನು ಮಂಡಿಸಿರುತ್ತಾರೆ. ಇವರು ಸುಳ್ಯ ತಾಲೂಕಿನ ಸಂಕಪಿತ್ಲು ಶಿವರಾಮ ಭಟ್ ಮತ್ತು ಸರಸ್ವತಿ ಇವರ ಪುತ್ರಿ ಹಾಗೂ ಮರಕ್ಕೂರು ಶಿವರಾಮ್ ಭಟ್ ಇವರ ಪತ್ನಿ. ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕ ಉಪನ್ಯಾಸಕೇತರ ಸಿಬ್ಬಂದಿಗಳು ಇವರ ಸಾಧನೆಯನ್ನು ಅಭಿನಂದಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು