ಬಂಧನಕ್ಕೊಳಗಾಗಿದ್ದ ಸಿ. ಟಿ. ರವಿಗೆ ಬಿಗ್ ರಿಲೀಫ್ ; ತಕ್ಷಣವೇ ಬಿಡುಗಡೆ ಮಾಡುವಂತೆ ಹೈಕೋರ್ಟ್ ಆದೇಶ – ಕಹಳೆ ನ್ಯೂಸ್
ಬೆಂಗಳೂರು: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿಗೆ ಬಿಗ್ ರಿಲೀಫ್ ಸಿಕ್ಕಿದೆ. ತಕ್ಷಣವೇ ಸಿ.ಟಿ.ರವಿ ಬಿಡುಗಡೆ ಮಾಡುವಂತೆ ಹೈಕೋರ್ಟ್ ಆದೇಶ ಹೊರಡಿಸಿದೆ.
ಪ್ರಕರಣದ ವಿಚಾರಣೆ ನಡೆಸಿದ ನ್ಯಾ. ಎಂ.ಜಿ.ಉಮಾ ನೇತೃತ್ವದ ಪೀಠವು ಆರೋಪಿಯನ್ನು ತಕ್ಷಣವೇ ಬಿಡುಗಡೆ ಮಾಡಿ. ಸಿ.ಟಿ.ರವಿ ಈಗ ಎಲ್ಲಿದ್ದಾರೋ ಅಲ್ಲಿಯೇ ಬಿಡುಗಡೆ ಮಾಡಿ ಎಂದು ಮಧ್ಯಂತರ ಆದೇಶ ನೀಡಿದ್ದಾರೆ. ಅಲ್ಲದೇ, ತನಿಖೆಗೆ ಸಹಕರಿಸಬೇಕು ಎಂದು ಸಿ.ಟಿ.ರವಿಗೆ ಷರತ್ತನ್ನು ಕೋರ್ಟ್ ವಿಧಿಸಿದೆ.
ಸಿ.ಟಿ.ರವಿ ಪರ ವಕೀಲ ಅಶೋಕ್ ಹಾರನಹಳ್ಳಿ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಪರ ವಕೀಲ ಶ್ಯಾಮ್‌ಸುಂದರ್ ವಾದ ಮಂಡಿಸಿದರು
ಆರೋಪಿ ಇನ್ನೂ ಪೊಲೀಸ್ ಕಸ್ಟಡಿಯಲ್ಲಿ ಇದ್ದಾರೆ. ಜಾಮೀನು ಅರ್ಜಿ ವಿಚಾರಣೆ ಮಾಡಲು ಸಾಧ್ಯವಿಲ್ಲ. ಇವತ್ತು ಬೆಳಗಾವಿ ಕೋರ್ಟ್ಗೆ ಹಾಜರುಪಡಿಸಿದರು. ಬಳಿಕ ಜನಪ್ರತಿನಿಧಿಗಳ ನ್ಯಾಯಾಲಯದ ವ್ಯಾಪ್ತಿಯಲ್ಲಿ ಪ್ರಕರಣ ಇದೆ ಅಂತ ಬೆಂಗಳೂರಿಗೆ ಕಳಿಸಿದ್ದಾರೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಪರ ವಕೀಲ ಶ್ಯಾಮ್‌ಸುಂದರ್ ವಾದಿಸಿದರು.