Sunday, January 19, 2025
ಕ್ರೈಮ್ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ ನಾವೂರು ಪ್ರಾಥಮಿಕ ಶಾಲೆಯ ಶಾಲಾ ವಾರ್ಷಿಕೋತ್ಸವಕ್ಕೆ ಬಂದಿದ್ದ ಯುವತಿಯ ಮೇಲೆ ಅತ್ಯಾಚಾರ ; ಆರೋಪಿ ಅರೆಸ್ಟ್ – ಕಹಳೆ ನ್ಯೂಸ್

ಬಂಟ್ವಾಳ, ಡಿ.23 : ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ಆಗಮಿಸಿದ್ದ ಯುವತಿಯೋರ್ವಳ ಮೇಲೆ ಯುವಕ ಅತ್ಯಾಚಾರಗೈದ ಘಟನೆ ನಡೆದಿರುವ ಬಗ್ಗೆ ತಡವಾಗಿ ವರದಿಯಾಗಿದ್ದು, ಅತ್ಯಾಚಾರ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ನೇತೃತ್ವದ ತಂಡ ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ.

ನಾವೂರ ನಿವಾಸಿ ಜಯಂತ ಎಂಬಾತ ಆರೋಪಿಯಾಗಿದ್ದು, ಸದ್ಯ ಜೈಲುವಾಸ ಆನುಭವಿಸುತ್ತಿದ್ದಾನೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಡಿ. 14 ರಂದು ನಾವೂರು ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮ ನೋಡುಲು ಮನೆಯವರ ಜೊತೆ ತೆರಳಿದ್ದ ಯುವತಿಯನ್ನು ಆರೋಪಿ ಜಯಂತ ಶಾಲಾ ಕೊಠಡಿಯಲ್ಲಿ ಕೂಡಿ ಹಾಕಿ ಅತ್ಯಾಚಾರ ಮಾಡಿದ್ದಾನೆ. ಈ ಬಗ್ಗೆ ನೊಂದ ಯುವತಿಯ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಗೆ ದೂರು ನೀಡಿದ್ದಳು.

ಜಾಹೀರಾತು
ಜಾಹೀರಾತು
ಜಾಹೀರಾತು

ಇದೀಗ ಗ್ರಾಮಾಂತರ ಎಸ್.ಐ.ಹರೀಶ್ ಅವರ ಪೋಲೀಸ್ ತಂಡ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು,ನ್ಯಾಯಾಲಯವು ಈತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.