Thursday, December 26, 2024
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ: ದ್ವಿಚಕ್ರವಾಹನದಲ್ಲಿ ಅಕ್ರಮ ಗೋ ಸಾಗಾಟ; ಅಪಘಾತದ ವೇಳೆ ರಸ್ತೆಗೆ ಬಿದ್ದ ಮಾಂಸದ ಕಟ್ಟುಗಳು; ಆರೋಪಿ ಪರಾರಿ-ಕಹಳೆ ನ್ಯೂಸ್

ಬಂಟ್ವಾಳ ತಾಲೂಕಿನ ಸಜೀಪಮುನ್ನೂರು ಗಾಂಧಿನಗರ ಕ್ರಾಸ್ ನಲ್ಲಿ ನಡೆದ ಸ್ಕೂಟರ್ ಅಪಘಾತದ ಸಂದರ್ಭದಲ್ಲಿ ಅಕ್ರಮ ಗೋಮಾಂಸ ಸಾಗಾಟ ಪತ್ತೆಯಾಗಿದ್ದು ಸವಾರನ ವಿರುದ್ಧ ಬಂಟ್ವಾಳ ಸೋಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಜೀಪಮುನ್ನೂರು ವಾಸದಗುಡ್ಡೆ ನಿವಾಸಿ ಸ್ಕೂಟರ್ ಸವಾರೆ ಅನುರಾಧ ಕೆ. ಅವರು ಕೆಲಸಕ್ಕೆ ಹೋಗುತ್ತಿರುವ ಸಂದರ್ಭದಲ್ಲಿ ಗಾಂಧಿನಗರ ಕ್ರಾಸ್ ಬಳಿ ಸಜೀಪ ಕಡೆಯಿಂದ ಆರೋಪಿ ಸವಾರ ಸ್ಕೂಟರನ್ನು ಅತಿ ವೇಗ ಚಲಾಯಿಸಿಕೊಂಡು ಬಂದು ಅನುರಾಧ ಅವರು ಚಲಾಯಿಸುತ್ತಿದ್ದ ಸ್ಕೂಟರಿಗೆ ಡಿಕ್ಕಿ ಹೊಡೆದಿದ್ದಾನೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ವೇಳೆ ಎರಡೂ ಸ್ಕೂಟರಿನ ಸವಾರರು ಕೂಡ ರಸ್ತೆಗೆ ಬಿದ್ದು ಗಾಯವಾಗಿದ್ದು, ಆರೋಪಿಯ ಸ್ಕೂಟರಿನಿಂದ ಪ್ಲಾಸ್ಟಿಕ್ ನಲ್ಲಿ ಕಟ್ಟಿದ ಮಾಂಸದ ಕಟ್ಟುಗಳು ಕೂಡ ರಸ್ತೆಗೆ ಬಿದ್ದಿದೆ. ಅಲ್ಲಿಂದ ತಕ್ಷಣ ಆರೋಪಿ ಪರಾರಿಯಾಗಿದ್ದು, ಆರೋಪಿ ಯಾರು ಎಂದು ತಿಳಿದುಬಂದಿಲ್ಲ. ಆರೋಪಿ ಎಲ್ಲಿಯೋ ದನವನ್ನು ಹತ್ಯೆ ಮಾಡಿ ಮಾಂಸವನ್ನು ಮಾರಾಟ ಮಾಡುವುದಕ್ಕಾಗಿ ಸಜೀಪ ಕಡೆಯಿಂದ ಮೆಲ್ಕಾರ್ ಕಡೆಗೆ ಅತಿ ವೇಗವಾಗಿ ದ್ವಿಚಕ್ರವಾಹನದಲ್ಲಿ ಬರುವಾಗ ಈ ಘಟನೆ ನಡೆದಿದೆ ಎಂದು ದೂರಿನಲ್ಲಿ ವಿವರಿಸಲಾಗಿದೆ. ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು