Friday, April 11, 2025
ಉಡುಪಿಕುಂದಾಪುರಸಂತಾಪಸುದ್ದಿ

ಜಮ್ಮು ಕಾಶ್ಮೀರದ ಪೂಂಜ್ ಜಿಲ್ಲೆಯ ಗಡಿರೇಖೆ ಬಳಿ ಭೀಕರ ರಸ್ತೆ ಅಪಘಾತ ;ಕುಂದಾಪುರದ ಯೋಧ ಹುತಾತ್ಮ-ಕಹಳೆ ನ್ಯೂಸ್

ಕುಂದಾಪುರ: ಸೇನಾ ಟ್ರಕ್ ರಸ್ತೆಯಿಂದ ಸ್ಕಿಡ್ ಆಗಿ ಕಂದಕಕ್ಕೆ ಬಿದ್ದ ಘಟನೆ ಜಮ್ಮು ಕಾಶ್ಮೀರದ ಪೂಂಚ್ ಜಿಲ್ಲೆಯ ಮೆಂಧರ್ ಪ್ರದೇಶದ ಬಲ್ನೋಯಿ ಪ್ರದೇಶದಲ್ಲಿ ನಡೆದಿದ್ದು, ಕುಂದಾಪುರ ಬೀಜಾಡಿಯ ಅನೂಪ್ ಪೂಜಾರಿ (31) ಸಹಿತ? ಐವರು ಮೃತ ಪಟ್ಟಿದ್ದಾರೆ.

ಅನೂಪ್ ಪೂಜಾರಿ ಸೇನೆಗೆ ಸೇರಿ 13 ವರ್ಷವಾಗಿತ್ತು. ಅವರು ಮರಾಠ ಬೆಟಾಲಿಯನ್ ನಲ್ಲಿ ಸೇವೆ ಸಲ್ಲಿಸುತ್ತಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಹುತಾತ್ಮರಾಧ ಯೋಧ ಅನೂಪ್ ಅವರಿಗೆ ವಿವಾಹವಾಗಿದ್ದು 2 ವರ್ಷದ ಹೆಣ್ಣು ಮಗುವಿದೆ. ಕಳೆದ ತಿಂಗಳು ರಜೆಗೆ ಆಗಮಿಸಿದ್ದ ಅವರು ಮಗಳ ಹುಟ್ಟುಹಬ್ಬವನ್ನು ಆಚರಿಸಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಗುರುವಾರ ತೆಕ್ಕಟ್ಟೆಯಿಂದ ಪಾರ್ಥೀವ ಶರೀರವನ್ನು ತೆರೆದ ವಾಹನದಲ್ಲಿ ಕೋಟೇಶ್ವರ ಮೂಲಕವಾಗಿ ಮೆರವಣಿಗೆ ನಡೆಸಿ ಹುಟ್ಟೂರಾದ ಬೀಜಾಡಿಗೆ ಕರೆತಂದು ಸಕಲ ವಿಧಿಗಳೊಂದಿಗೆ ಅಂತ್ಯಸAಸ್ಕಾರ ನಡೆಸಲಾಗುತ್ತದೆ. ಬೀಜಾಡಿ ಪಡುಶಾಲೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ತೆ ಕಲ್ಪಿಸಲಾಗುತ್ತದೆ ಎಂದು ತಿಳಿದು ಬಂದಿದೆ.

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ