Friday, December 27, 2024
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ನರೇಂದ್ರ ಪ.ಪೂ.ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ ಮತ್ತು ಸಮಾರೋಪ ಸಮಾರಂಭ-ಕಹಳೆ ನ್ಯೂಸ್

ಪುತ್ತೂರು: ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಗೆ ಕ್ರೀಡೆಗಳು ಅತ್ಯಗತ್ಯ. ವಿವಿಧ ಕ್ರೀಡೆಗಳನ್ನು ಆಡುವುದರಿಂದ ಅವರು ತಂಡದ ಕೆಲಸ, ನಾಯಕತ್ವ, ಹೊಣೆಗಾರಿಕೆ, ತಾಳ್ಮೆ ಮತ್ತು ಆತ್ಮ ವಿಶ್ವಾಸದಂತಹ ಜೀವನ ಕೌಶಲ್ಯಗಳನ್ನು ಮೈಗೂಡಿಸಿಕೊಳ್ಳಲು ಸಹಾಯವಾಗುತ್ತದೆ. ಮತ್ತು ಜೀವನದ ಸವಾಲುಗಳನ್ನು ಎದುರಿಸಲು ಅವರನ್ನು ಸಿದ್ಧಪಡಿಸುತ್ತದೆ. ಕ್ರೀಡೆಗಳು ವಿದ್ಯಾರ್ಥಿಗಳಿಗೆ ಬಾಲ್ಯದಿಂದಲೇ ಬಲವಾದ ಮಾನಸಿಕ ಮತ್ತು ದೈಹಿಕ ಅಡಿಪಾಯವನ್ನು ಅಭಿವೃದ್ಧಿಪಡಿಸಲು ಸಹಾಯ ಮಾಡುತ್ತದೆ.ಇಂತಹ ಕ್ರೀಡಾಕೂಟಗಳು ವ್ಯಕ್ತಿಯ ವ್ಯಕ್ತಿತ್ವದ ರಚನೆಗೆ ಕಾರಣವಾಗುತ್ತದೆ ಮತ್ತು ಅವರ ಸಮಗ್ರ ಬೆಳವಣಿಗೆಗೆ ಕೊಡುಗೆ ನೀಡುತ್ತದೆ. ಎಂದು
ವಿವೇಕಾನAದ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ಸತೀಶ್ ಕುಮಾರ್ ರೈ ಇವರು ಹೇಳಿದರು.

ನರೇಂದ್ರ ಪ.ಪೂ.ಕಾಲೇಜಿನಲ್ಲಿ ದ. 24 ರಂದು ನಡೆದ 2024-25 ನೇ ಸಾಲಿನ ವಾರ್ಷಿಕ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಮುಖ್ಯಅತಿಥಿಯಾಗಿ ಅವರು ಮಾತನಾಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಕ್ರೀಡಾಕೂಟದಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ನೀಡಿ ಅಭಿನಂದಿಸಲಾಯಿತು. ಈ ಕ್ರೀಡಾಕೂಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ದಾಮೋದರ,ಕೆನರಾ ಕಾಲೇಜಿನ ದೈಹಿಕ ಶಿಕ್ಷಣ ಶಿಕ್ಷಕರಾದ ಕಾರ್ತಿಕ್, ದೈಹಿಕ ಶಿಕ್ಷಣ ಶಿಕ್ಷಕರಾದ ಮನೋಹರ್ ಎನ್., ರವರು ಸಹಕರಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರಸಾದ್ ಶ್ಯಾನಭಾಗ್ ಸ್ವಾಗತಿಸಿ, ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿಯಾದ ಗುರುದೀಪ ವಂದಿಸಿದರು.