Sunday, March 30, 2025
ಜಿಲ್ಲೆಶಿವಮೊಗ್ಗಸುದ್ದಿ

ಜೀಪ್ ಮತ್ತು ಟಿಟಿ ನಡುವೆ ಮುಖಾಮುಖಿ ಡಿಕ್ಕಿ: 8 ಮಂದಿಗೆ ಗಾಯ-ಕಹಳೆ ನ್ಯೂಸ್

ಶಿವಮೊಗ್ಗ: ಹೊಸನಗರ ತಾಲೂಕಿನ ನಿಟ್ಟೂರು ಸಮೀಪ ಜೀಪ್ ಹಾಗೂ ಟಿಟಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ 8 ಮಂದಿ ಗಾಯಗೊಂಡ ಘಟನೆ ನಡೆದಿದೆ.

ಶಿವಮೊಗ್ಗ ಕಡೆಯಿಂದ ತೆರಳುತ್ತಿದ್ದ ಟಿಟಿ ವಾಹನ ಕೊಲ್ಲೂರಿನಿಂದ ಕೊಡಚಾದ್ರಿಗೆ ತೆರಳುತ್ತಿದ್ದ ಜೀಪ್‌ಗೆ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಎರಡು ವಾಹನಗಳ ಮುಂಭಾಗ ಸಂಪೂರ್ಣ ಜಖಂಗೊAಡಿವೆ. ಪರಿಣಾಮ ಜೀಪ್‌ನಲ್ಲಿದ್ದ 8 ಜನಗಾಯಗೊಂಡಿದ್ದಾರೆ. ಇದರಲ್ಲಿ ಮೂವರಿಗೆ ಗಂಭೀರ ಗಾಯವಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಕುಂದಾಪುರದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಗಾಡಿಯಲ್ಲಿದ್ದ ಕೆಲವರು ಕೇರಳದಿಂದ ಕೊಲ್ಲೂರು ಮೂಕಾಂಬಿಕೆಯ ದರ್ಶನಕ್ಕೆ ಬಂದಿದ್ದರು ಎನ್ನಲಾಗಿದೆ. ಘಟನಾ ಸ್ಥಳಕ್ಕೆ ನಗರ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ