Friday, September 20, 2024
ಸುದ್ದಿ

ಅನಾರೋಗ್ಯದಿಂದ ಕೇಂದ್ರ ಸಚಿವ ಅನಂತ್ ಕುಮಾರ್ ನಿಧನ – ಕಹಳೆ ನ್ಯೂಸ್

ಬೆಂಗಳೂರು: ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ, ಕರ್ನಾಟಕ ಬಿಜೆಪಿಯ ಹಿರಿಯ ಮುಖಂಡ ಎಚ್.ಎನ್. ಅನಂತಕುಮಾರ್ (59) ನಿಧನರಾಗಿದ್ದಾರೆ.

ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅನಂತಕುಮಾರ್ ಅವರು ಸೋಮವಾರ ನಸುಕಿನ ಜಾವ ಎರಡು ಗಂಟೆ ಸುಮಾರಿಗೆ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು

ಜಾಹೀರಾತು
ಜಾಹೀರಾತು
ಜಾಹೀರಾತು

ಇತ್ತೀಚೆಗೆ ತೀವ್ರ ಅನಾರೋಗ್ಯಪೀಡಿತರಾಗಿದ್ದ ಅನಂತಕುಮಾರ್ ಅವರನ್ನು ಕಳೆದ ಎರಡು ದಿನಗಳಿಂದ ವೆಂಟಿಲೇಟರ್‍ನಲ್ಲಿ ಇಡಲಾಗಿತ್ತು. ಅನಂತಕುಮಾರ್ ಅವರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಜಾಹೀರಾತು

ಇಂದು ಬೆಳಗ್ಗೆ ಪ್ರಧಾನಿ ಮೋದಿ ಬೆಂಗಳೂರಿಗೆ ಬರಲಿದ್ದಾರೆ. ಬೆಳಗ್ಗೆ 9 ಗಂಟೆಯ ನಂತರ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು.