‘ಡಾ.ಮನಮೋಹನ್ ಸಿಂಗ್’ ಅಂತ್ಯಕ್ರಿಯೆಯಲ್ಲಿ ಭಾಗಿಯಾದ ಪ್ರಧಾನಿ ಮೋದಿ, ರಾಷ್ಟ್ರಪತಿ ‘ದ್ರೌಪದಿ ಮುರ್ಮು.!- ಕಹಳೆ ನ್ಯೂಸ್
ನವದೆಹಲಿ : ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅಂತ್ಯಕ್ರಿಯೆಯಲ್ಲಿ ಪ್ರಧಾನಿ ಮೋದಿ ಹಾಗೂ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗಿಯಾಗಲಿದ್ದಾರೆ.
ದೆಹಲಿಯ ನಿಗಮ್ ಬೋಧ್ ಘಾಟ್ ನಲ್ಲಿ ಸಿಖ್ ಸಂಪ್ರದಾಯದಂತೆ ಸಕಲ ಸರ್ಕಾರಿ ಗೌರವಗಳೊಂದಿಗೆ ಡಾ.ಮನಮೋಹನ್ ಸಿಂಗ್ ಅಂತ್ಯಕ್ರಿಯೆ ನೆರವೇರಲಿದ್ದು, ಪ್ರಧಾನಿ ಮೋದಿ ಹಾಗೂ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗಿಯಾಗಲಿದ್ದಾರೆ.
ಈ ಹಿನ್ನೆಲೆ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಿದ್ದಾರೆ. ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರು ಡಿ.26 ರಂದು ದೆಹಲಿ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.