ಗ್ಯಾಸ್ ಸಿಲಿಂಡರ್ ಸ್ಪೋ*ಟ ಪ್ರಕರಣ: ಚಿಕಿತ್ಸೆ ಫಲಿಸದೇ ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಸಾವು -ಕಹಳೆ ನ್ಯೂಸ್
ಹುಬ್ಬಳ್ಳಿ: ಸಾಯಿನಗರದಲ್ಲಿ ಡಿ. 22ರಂದು ಸಂಭವಿಸಿದ್ದ ಗ್ಯಾಸ್ ಸಿಲಿಂಡರ್ ಸ್ಪೋ*ಟ ಪ್ರಕರಣಕ್ಕೆ ಸಂಬAಧಿಸಿದAತೆ ಸಿಲಿಂಡರ್ ಸ್ಫೋಟಗೊಂಡು ಗಂಭೀರವಾಗಿ ಗಾಯಗೊಂಡಿದ್ದ
ಇನ್ನೋರ್ವ ಅಯ್ಯಪ್ಪ ಮಾಲಾಧಾರಿ ಮೃ*ತಪಟ್ಟಿದ್ದಾರೆ. ಮೃ*ತರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ.
ಮೃ*ತರನ್ನು ಹುಬ್ಬಳ್ಳಿಯ ಉಣಕಲ್ ನಿವಾಸಿ ಶಂಕರ ಚವ್ಹಾಣ್ (29) ಎಂದು ಗುರುತಿಸಲಾಗಿದ್ದು, ಕಿಮ್ಸ್ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದಲ್ಲಿ ವಾರ್ಡ್ ಬಾಯ್ ಆಗಿ ಕೆಲಸ ಮಾಡುತ್ತಿದ್ದರು. ಗಂ*ಭೀರವಾಗಿ ಗಾಯಗೊಂಡಿದ್ದ ಶಂಕರ್ ಅವರನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ಕೊಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು (ಡಿ.29) ಕೊ*ನೆಯುಸಿರು ಎಳೆದಿದ್ದಾರೆ.
ಹುಬ್ಬಳ್ಳಿಯ ಸಾಯಿನಗರದ ಅಚ್ಚವ್ವಳ ಕಾಲೋನಿಯ ಈಶ್ವರ ದೇವಸ್ಥಾನದಲ್ಲಿ ಡಿಸೆಂಬರ್ 22ರಂದು ಸಂಜೆ ಸಿಲಿಂಡರ್ ಸ್ಪೋ*ಟ ಸಂಭವಿಸಿತ್ತು. ಘಟನೆಯಲ್ಲಿ 9 ಮಂದಿ ಅಯ್ಯಪ್ಪ ಮಾಲಾಧಾರಿಗಳು ಗಂ*ಭೀರವಾಗಿ ಗಾಯಗೊಂಡಿದ್ದರು. ಈ ಪೈಕಿ ನಿಜಲಿಂಗಪ್ಪ ಬೇಪುರಿ (58), ಸಂಜಯ್ ಸವದತ್ತಿ (20), ರಾಜು ಮೂಗೇರಿ(21), ಲಿಂಗಾರಾಜು ಬೀರನೂರ(24), ಶಂಕರ್ ಚವ್ಹಾಣ್ (29) ಮೃ*ತ ದುರ್ದೈವಿಗಳು.
ಘಟನೆಯಲ್ಲಿ ಮಂಜುನಾಥ್ ವಾಗ್ಮೋಡೆ, ಪ್ರಕಾಶ್ ಬಾರಕೇರ್, ವಿನಾಯಕ ಬಾರಕೇರ್, ತೇಜಸ್ವರ್ ಸಾತರೆಯನ್ನು ತೀವ್ರ ನಿಗಾಘಟಕದಲ್ಲಿ ಇರಿಸಿ ಚಿಕಿತ್ಸೆ ಕೊಡಲಾಗುತ್ತಿದ್ದು, ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.