Wednesday, April 2, 2025
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸಂತಾಪಸುದ್ದಿ

ನೇಣು ಬಿಗಿದು ವಿಟ್ಲ ಮೂಲದ ವ್ಯಕ್ತಿ ಆತ್ಮಹತ್ಯೆ- ಕಹಳೆ ನ್ಯೂಸ್

ಬಂಟ್ವಾಳ : ನೇಣು ಬಿಗಿದುಕೊಂಡು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದ ಅತಿಕಾರಬೈಲು ಎಂಬಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ವಿಠಲ ಪೂಜಾರಿ (49) ಎಂದು ಗುರುತಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ವಿಠಲ ಪೂಜಾರಿ ಇವರು ಯುವಕೇಸರಿ ಅತಿಕಾರಬೈಲು ಅಧ್ಯಕ್ಷರಾಗಿದ್ದವರು. ಇವರು ನಾಟಕ ಕಲಾವಿದರು ಮತ್ತು ಬಿಲ್ಲವ ಸಂಘದಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದರು. ಚಂದಳಿಕೆ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷರಾಗಿ, ಊರಿನ ಧಾರ್ಮಿಕ ಮತ್ತು ಸಾಮಾಜಿಕ ಕಾರ್ಯದಲ್ಲಿ ತನ್ನನು ತಾನು ತೊಡಗಿಸಿಕೊಂಡಿದ್ದವರು. ಸದ್ಯ ಮನೆಯ ಹಟ್ಟಿಯ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಮೃತರು ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ