ಮಣಿಪಾಲ ಜ್ಞಾನ ಸುಧಾ ಪ್ರತಿಭಾ ಕಾರಂಜಿಯಲ್ಲಿ ತನ್ಮಯಿ ಆರ್. ಆರಾಧ್ಯ ರಾಜ್ಯ ಮಟ್ಟಕ್ಕೆ ಆಯ್ಕೆ-ಕಹಳೆ ನ್ಯೂಸ್

ಮಣಿಪಾಲ:ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇತ್ರಾಭಿವೃದ್ಧಿ ಮತ್ತು ಶಾಲಾ 2ಕ್ಷಣ ಇಲಾಖೆಯ ವತಿಯಿಂದ ಜನವರಿ 2ರಂದು ದುರ್ಗಾ ಆಂಗ್ಲಮಾಧ್ಯಮ ಶಾಲೆ ಕೊಕ್ಕರ್ಣೆಯಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಮಣಿಪಾಲ ಜ್ಞಾನ ಸುಧಾ ಪದವಿ ಪೂರ್ವ ಕಾಲೇಜು ವಿದ್ಯಾ ನಗರದ ಪ್ರಥಮ ಪಿ.ಯು.1. ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ತನ್ಮಯಿ ಆರ್. ಆರಾಧ್ಯ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಇವರು ಕುಂದಾಪುರದ ಎಂ. ರಾಜಶೇಖರ ಹಾಗೂ ಕಲ್ಪನಾ ಆರ್ ದಂಪತಿಯ ಸುಪುತ್ರಿ. ಸಾಧಕ ವಿದ್ಯಾರ್ಥಿನಿಯನ್ನು ಅಜೆಕಾರ್
ಪದ್ಮಗೋಪಾ ಲ್ ಎಜುಕೇಶನ್ ಟ್ರಸ್ಟ್(ರಿ.)ನ ಅಧ್ಯಕ್ಷರಾದ ಡಾ. ಸುಧಾಕರ ಶೆಟ್ಟಿ, ಕಾಲೇಜಿನ ಪ್ರಾಂಶುಪಾಲರು ಹಾಗೂ ಬೋಧಕ-ಬೋಧಕೇತರ ವರ್ಗ ಅಭಿನಂದಿಸಿರುತ್ತಾರೆ.