Monday, January 6, 2025
ದಕ್ಷಿಣ ಕನ್ನಡಬಂಟ್ವಾಳಬೆಳ್ತಂಗಡಿಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಜ.7ರಂದು ‘ಶ್ರೀ ಸಾನ್ನಿಧ್ಯ’ ಸಂಕೀರ್ಣ ಉದ್ಘಾಟನೆ – ಕಹಳೆ ನ್ಯೂಸ್

ಉಜಿರೆ : ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ದೇವರ ದರ್ಶನಕ್ಕಾಗಿ ಸರತಿಯಲ್ಲಿ ನಿಲ್ಲುವ ಭಕ್ತರ ಅನುಕೂಲಕ್ಕಾಗಿ ನಿರ್ಮಿಸಿರುವ ಹೊಸ ಸಂಕೀರ್ಣ ‘ಶ್ರೀ ಸಾನ್ನಿಧ್ಯ’ವನ್ನು ಇದೇ 7ರಂದು ಮಧ್ಯಾಹ್ನ 2 ಗಂಟೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಉದ್ಘಾಟಿಸುವರು.

ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಧರ್ಮಸ್ಥಳದ ಹೇಮಾವತಿ ಹೆಗ್ಗಡೆ, ಲೋಕಸಭಾ ಸದಸ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ ಭಾಗವಹಿಸುವರು.

ಜಾಹೀರಾತು
ಜಾಹೀರಾತು
ಜಾಹೀರಾತು

2.75ಲಕ್ಷ ಚದರ ಅಡಿ ವಿಸ್ತೀರ್ಣದ ಸಂಕೀರ್ಣ ಎರಡು ಅಂತಸ್ತು ಹೊಂದಿದ್ದು ಆಧುನಿಕ ತಂತ್ರಜ್ಞಾನ ಬಳಸಿ ಭಕ್ತರ ಅನುಕೂಲಕ್ಕೆ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. 16 ವಿಶಾಲ ಸಭಾಭವನಗಳಲ್ಲಿ ಭಕ್ತರು ವಿಶ್ರಾಂತಿ ಪಡೆಯಬಹುದಾಗಿದೆ. ಪ್ರತಿ ಸಭಾಭವನದಲ್ಲಿ 800 ಮಂದಿ ವಿಶ್ರಾಂತಿ ಪಡೆದುಕೊಳ್ಳಲು ಅವಕಾಶವಿದೆ. ಮಕ್ಕಳ ಆರೈಕೆ ಕೊಠಡಿ, ಶೌಚಾಲಯ, ಕ್ಯಾಂಟೀನ್ ಸೌಲಭ್ಯವೂ ಇದೆ. ಸೂಚನಾಫಲಕಗಳು ಹಾಗೂ ಸಿಸಿಟಿವಿ ಕ್ಯಾಮೆರಾಗಳೂ ಇವೆ. ಸಂಕೀರ್ಣದ ಪ್ರವೇಶದ್ವಾರದ ಎದುರು ಧರ್ಮಸ್ಥಳದ ಇತಿಹಾಸ ಮತ್ತು ಪರಂಪರೆಯನ್ನು ಬಿಂಬಿಸುವ ಆಕರ್ಷಕ ಕಲಾಕೃತಿಗಳನ್ನು ಇರಿಸಲಾಗಿದೆ ಎಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು