ಬೆಂಗಳೂರು : ರಾಜ್ಯದ ಸಾರಿಗೆ ನೌಕರರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, 2000 ಕೋಟಿ ಪಿಎಫ್ ಹಣ ಬಿಡುಗಡೆಗೆ ಸರ್ಕಾರ ಅನುಮೋದನೆ ನೀಡಿದೆ.
ಕರ್ನಾಟಕ ಸಾರಿಗೆಯ 4 ನಿಗಮದ ನೌಕರರ ಬರೋಬ್ಬರಿ 2792 ಕೋಟಿ ಪಿಎಫ್ ಹಣವನ್ನು ಅಧಿಕಾರಿಗಳು ದುರ್ಬಳಕ್ಕೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.
ಇದೀಗ ಸಿಎಂ ಸಿದ್ದರಾಮಯ್ಯ 2000 ಕೋಟಿ ಹಣ ನೀಡಲು ಗ್ರೀನ್ ಸಿಗ್ನಲ್ ನೀಡಿದ್ದಾರೆ.
ಸಿಬ್ಬಂದಿಗಳ ಪಿಎಫ್ ಟ್ರಸ್ಟ್ ಗೆ 2000 ಕೋಟಿ ನೀಡಲು ನಿರ್ಧರಿಸಿದ್ದು, ಸಚಿವ ಸಂಪುಟದಲ್ಲಿ ಅನುಮೋದನೆ ಸಿಕ್ಕಿದೆ. 4 ನಿಗಮಗಳು ಬ್ಯಾಂಕ್ ನಿಂದ ಸಾಲ ಪಡೆದು ಪಿಎಫ್ ಟ್ರಸ್ಟ್ ಗೆ ಹಣ ನೀಡಲಿದೆ.
ಜ. 5ರಿಂದ ಸಾರಿಗೆ ಬಸ್ ಟಿಕೆಟ್ ಪರಿಷ್ಕೃತ ದರ ಜಾರಿ
ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಸೇರಿದಂತೆ ರಾಜ್ಯದ ನಾಲ್ಕು ಸಾರಿಗೆ ಸಂಸ್ಥೆಗಳ ಪ್ರಯಾಣ ದರವನ್ನು ಶೇಕಡ 15ರಷ್ಟು ಏರಿಕೆ ಮಾಡಲಾಗಿದೆ. ಜನವರಿ 5 ರಿಂದ ಪರಿಷ್ಕೃತ ಟಿಕೆಟ್ ದರ ಜಾರಿಗೆ ಬರಲಿದೆ.ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಶೇಕಡ 15ರಷ್ಟು ಬಸ್ ಟಿಕೆಟ್ ದರ ಹೆಚ್ಚಳಕ್ಕೆ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಕಳೆದ 5-10 ವರ್ಷಗಳಿಂದ ಟಿಕೆಟ್ ದರ ಹೆಚ್ಚಳ ಮಾಡಿರಲಿಲ್ಲ. ಡೀಸೆಲ್ ದರ ಹೆಚ್ಚಳ, ಸಿಬ್ಬಂದಿ ವೇತನ ಏರಿಕೆ, ಬಿಡಿ ಭಾಗಗಳ ದರ ಹೆಚ್ಚಳದಿಂದಾಗಿ ಬಸ್ ಟಿಕೆಟ್ ದರ ಹೆಚ್ಚಳ ಮಾಡಲಾಗಿದೆ. ಜನವರಿ 5 ರಿಂದ ಪರಿಷ್ಕೃತ ದರ ಜಾರಿಗೆ ಬರಲಿದೆ.