Monday, January 6, 2025
ದಕ್ಷಿಣ ಕನ್ನಡಮಂಗಳೂರುಸುದ್ದಿ

ಬಾಣಂತಿಯರ ಮತ್ತು ನವಜಾತ ಶಿಶುಗಳ ಸರಣಿ ಸಾವು: ಮಹಿಳಾ ಮೋರ್ಚಾ ಆರೋಪ-ಕಹಳೆ ನ್ಯೂಸ್

ಮಂಗಳೂರು: ರಾಜ್ಯದಲ್ಲಿ ಬಾಣಂತಿಯರ ಮತ್ತು ನವಜಾತ ಶಿಶುಗಳ ಸರಣಿ ಸಾವು ಸಂಭವಿಸುತ್ತಿದ್ದರೂ, ತಡೆಗಟ್ಟಲು ಸರ್ಕಾರ ಕ್ರಮ ಕೈಗೊಳ್ಳುತ್ತಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಮೋರ್ಚಾ ಆರೋಪಿಸಿದೆ.

ಈ ಕುರಿತು ಇಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಹಿಳಾ ಮೋರ್ಚಾದ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷೆ ಮಂಜುಳಾ ರಾವ್, ‘ಆರೋಗ್ಯ ಇಲಾಖೆಯಲ್ಲಿ ಭ್ರಷ್ಟಾಚಾರ ವ್ಯಾಪಕವಾಗಿದೆ.
ಬಾಣಂತಿಯರ ಸಾವಿಗೆ ಕಳಪೆ ದರ್ಜೆಯ ಔಷಧಗಳೂ ಕಾರಣ. ಇನ್ನೊಂದೆಡೆ, ಕೇಂದ್ರ ಸರ್ಕಾರದ ಮಾತೃ ವಂದನಾ, ಪೋಷಣ್ ಅಭಿಯಾನಗಳೂ ರಾಜ್ಯದಲ್ಲಿ ಸಮರ್ಪಕವಾಗಿ ಜಾರಿಯಾಗುತ್ತಿಲ್ಲ. ಸರ್ಕಾರಿ ಆಸ್ಪತ್ರೆಗಳಲ್ಲಿ ಬಾಣಂತಿಯರ ಹಾಗೂ ನವಜಾತ ಶಿಶುಗಳ ಸಾವುಗಳ ಹೊಣೆ ಹೊತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ರಾಜೀನಾಮೆ ನೀಡಬೇಕು’ ಎಂದು ಆಗ್ರಹಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

‘ಸಾವಿಗೀಡಾದ ಬಾಣಂತಿಯರ ಕುಟುಂಬಗಳಿಗೆ ತಲಾ ? 25 ಲಕ್ಷ ಪರಿಹಾರವನ್ನು ರಾಜ್ಯ ಸರ್ಕಾರ ನೀಡಬೇಕು. ತಾಯಿಯನ್ನು ಕಳೆದುಕೊಂಡು ಅನಾಥರಾದ ಮಕ್ಕಳನ್ನು ದತ್ತು ತೆಗೆದುಕೊಂಡು, ಅವರಿಗೆ ಬದುಕು ಕಟ್ಟಿಕೊಡಲು ವ್ಯವಸ್ಥೆ ಮಾಡಬೇಕು. ಇದರ ನಿರ್ವಹಣೆಗೆ ಸಮಿತಿಯನ್ನು ರಚಿಸಬೇಕು’ ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು

‘ದಕ್ಷಿಣ ಕನ್ನಡ ಜಿಲ್ಲೆಯಲ್ಲೂ 2023- 24ನೇ ಸಾಲಿನಲ್ಲಿ 9 ಬಾಣಂತಿಯರು ಸತ್ತಿದ್ದಾರೆ. ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯವಸ್ಥೆ ಹದಗೆಟ್ಟಿದೆ. ಸಿಬ್ಬಂದಿ ಕೊರತೆ, ಔಷಧ ಕೊರತೆ ಇದೆ. ಆಂಬುಲೆನ್ಸ್ ನಿರ್ವಹಣೆಯೂ ಸಮರ್ಪಕವಾಗಿ ಆಗುತ್ತಿಲ್ಲ’ ಎಂದು ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಮಹಿಳಾ ಮೋರ್ಚಾ ರಾಜ್ಯ ಘಟಕದ ಕಾರ್ಯದರ್ಶಿ ಶ್ವೇತಾ ಪೂಜಾರಿ, ಜಿಲ್ಲಾ ಘಟಕದ ಕಾರ್ಯದರ್ಶಿ ವಿದ್ಯಾ ಗೌರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲಿಖಿತಾ ಶೆಟ್ಟಿ, ಉಪಾಧ್ಯಕ್ಷೆ ವಜ್ರಾಕ್ಷಿ ಹಾಗೂ ಸಂಧ್ಯಾ ವೆಂಕಟೇಶ್ ಭಾಗವಹಿಸಿದ್ದರು.