Monday, January 6, 2025
ಜಿಲ್ಲೆಸುದ್ದಿ

ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಶಬರಿಮಲೆಗೆ ಹೊರಟ ಮುಸ್ಲಿಂ ಯುವಕ-ಕಹಳೆ ನ್ಯೂಸ್

ರಾಯಚೂರು:ಜಿಲ್ಲೆಯ ದೇವದುರ್ಗ ಪಟ್ಟಣದ ಮುಸ್ಲಿಂ ಸಮುದಾಯದ ವ್ಯಕ್ತಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸುವ ಮೂಲಕ ಭಾವೈಕ್ಯತೆ ಮೆರೆದಿದ್ದಾನೆ.

ಕಳೆದ 10 ವರ್ಷಗಳಿಂದಲೂ ಇವರು ಅಯ್ಯಪ್ಪ ಸ್ವಾಮಿ ಮಾಲೆ ಧರಿಸುತ್ತಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮಕರ ಸಂಕ್ರಾAತಿ ಪ್ರಯುಕ್ತ ಶಬರಿಮಲೆ ಅಯ್ಯಪ್ಪಸ್ವಾಮಿಗೆ ಹರಕೆ ಹೊತ್ತು ಮಾಲೆ ಧರಿಸುವವರ ಸಂಖ್ಯೆ ಹೆಚ್ಚಿರುತ್ತದೆ. ಅನೇಕ ಹಿಂದು ಭಕ್ತರೊಡನೆ ಬಾಬು ಕೂಡ ಜತೆಯಾಗಿದ್ದಾರೆ. ಪ್ರತಿ ವರ್ಷ ಮಾಲೆ ಧರಿಸಿ ಅಯ್ಯಪ್ಪನ ದರ್ಶನಕ್ಕೆ ತೆರಳುತ್ತಾರೆ. ಸರದಿ ಸಾಲಲ್ಲಿ ನಿಂತು ಅಯ್ಯಪ್ಪನ ದರ್ಶನ ಪಡೆದು ಪುನೀತರಾಗುತ್ತಾರೆ. ಬಾಬು ಅವರು ಎಲ್ಲರಂತೆ ಅಯ್ಯಪ್ಪ ಸ್ವಾಮಿ ಪೂಜೆ ಸಲ್ಲಿಸುತ್ತಾರೆ. ಎಲ್ಲರೊಡಗೂಡಿ ಪಾದಯಾತ್ರೆ ನಡೆಸುತ್ತಾರೆ. ಅಲ್ಲದೇ, ಶಬರಿಮಲೆಗೆ ತೆರಳಿ ಭಕ್ತಿ ಸಮರ್ಪಿಸುತ್ತಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಬಾಬು ಭಕ್ತಿ ಭಾವಕ್ಕೆ ಸಾರ್ವಜನಿಕರ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಹಿಂದೂ ಮುಸ್ಲಿಂ ಎಂದು ಕಿತ್ತಾಡುವ ಜನರಿಗೆ ಬಾಬು ಗೌರಂಪೇಟ್ ನಡೆ ಆದರ್ಶವಾಗುತ್ತಿದೆ.