ಇಡಿ ಅಧಿಕಾರಿಗಳೆಂದು ಹೇಳಿ ಸಿಂಗಾರಿ ಬೀಡಿ ಸಂಸ್ಥೆಯ ಉದ್ಯಮಿ ಮನೆಗೆ ಎಂಟ್ರಿ ಕೊಟ್ಟ ಖದೀಮರು : 2ಗಂಟೆ ತನಿಖೆ ನಡೆಸಿ 30 ಲಕ್ಷ ರೂ. ದೋಚಿ ಪರಾರಿ – ಕಹಳೆ ನ್ಯೂಸ್

ಬಂಟ್ವಾಳ: ಇಡಿ ಅಧಿಕಾರಿಗಳೆಂದು ನಂಬಿಸಿ ಉದ್ಯಮಿಯ ಮನೆಗೆ ಎಂಟ್ರಿ ಕೊಟ್ಟು ಬರೋಬ್ಬರಿ 30 ಲಕ್ಷ ಲೂಟಿ ಮಾಡಿದ ಘಟನೆ ಬೋಳಂತೂರು ಸಮೀಪದ ನಾರ್ಶ ಎಂಬಲ್ಲಿ ನಡೆದಿದೆ.
ಬಂಟ್ವಾಳ ತಾಲೂಕಿನ ವಿಟ್ಲ ಪೋಲಿಸ್ ಠಾಣಾ ವ್ಯಾಪ್ತಿಯ ಬೋಳಂತೂರು ಸಮೀಪದ ನಾರ್ಶ ನಿವಾಸಿ ಸುಲೈಮಾನ್ ಹಾಜಿಯವರು ಸಿಂಗಾರಿ ಬೀಡಿ ಸಂಸ್ಥೆಯನ್ನು ಅನೇಕ ವರ್ಷಗಳಿಂದ ನಡೆಸುತ್ತಿದ್ದಾರೆ. ತಡರಾತ್ರಿ ಸುಲೈಮಾನ್ ಅವರ ಮನೆಗೆ ತಮಿಳುನಾಡು ಮೂಲದ ಕಾರಿನಲ್ಲಿ ಆಗಮಿಸಿದ ತಂಡವೊAದು ದಿಢೀರ್ ದಾಳಿ ನಡೆಸಿದೆ. ನಾವು ಇಡಿ ಅಧಿಕಾರಿಗಳು ಎಂದು ನಂಬಿಸಿ ಸುಮಾರು ಎರಡು ಗಂಟೆಗಳವರೆಗೆ ತನಿಖೆ ನಡೆಸಿದೆ.
ಮನೆಯಲ್ಲಿದ್ದ ಸುಮಾರು 30 ಲಕ್ಷ ರೂಪಾಯಿಗಳನ್ನು ದೋಚಿ ತಂಡ ಪರಾರಿಯಾಗಿದೆ. ಘಟನಾ ಸ್ಥಳಕ್ಕೆ ವಿಟ್ಲ ಪೋಲಿಸರು ಭೇಟಿ ನೀಡಿದ್ದಾರೆ ಎಂದು ತಿಳಿದು ಬಂದಿದೆ.