Tuesday, February 11, 2025
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಜಿಲ್ಲಾಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಫಿಲೋಮಿನಾ ಪ ಪೂ ಕಾಲೇಜಿಗೆ ಪ್ರಶಸ್ತಿ-ಕಹಳೆ ನ್ಯೂಸ್

ಪುತ್ತೂರು: ಕರ್ನಾಟಕ ಸರ್ಕಾರ, ರಾಜ್ಯ ಚುನಾವಣಾ ಆಯೋಗ, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ದಕ್ಷಿಣ ಕನ್ನಡ ಜಿಲ್ಲೆ ಮತ್ತು ಶಕ್ತಿ ಪದವಿ ಪೂರ್ವ ಕಾಲೇಜು, ಶಕ್ತಿನಗರ, ಮಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಇತ್ತೀಚೆಗೆ ‘ರಾಷ್ಟ್ರೀಯ ಮತದಾರರ ದಿನಾಚರಣೆಯ ಪ್ರಯುಕ್ತ’ ನಡೆದ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಅಪೂರ್ವ ಇವರು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.

ಇವರು ಕಾವು ನಿವಾಸಿ ವಸಂತ ಸಾಲ್ವಂಕರ್ ಮತ್ತು ಅರುಣಾ ಪಿ.ಕೆ ದಂಪತಿಗಳ ಪುತ್ರಿ. ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ.ಅಶೋಕ್ ರಾಯನ್ ಕ್ರಾಸ್ತಾ ಅಭಿನಂದಿಸಿದರು. ರಾಜ್ಯಶಾಸ್ತ್ರ ವಿಭಾಗದ ಭರತ್ ಕುಮಾರ್ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು